ಪ್ರಗತಿವಾಹಿನಿ ಸುದ್ದಿ; ತುಮಕೂರು: ಕಾಂಗ್ರೆಸ್ ಪಾಳಯದಲ್ಲಿ ಆರಂಭವಾಗಿರುವ ನಾಯಕತ್ವದ ಕಲಹಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಯಾರು ಏನೇ ಹೇಳಿಕೆಗಳನ್ನು ನೀಡಿದರೂ ನಮ್ಮಲ್ಲಿ ಕೆಪಿಸಿಸಿ ಅಧ್ಯಕ್ಷರೇ ಸುಪ್ರೀಂ ಎಂದು ಹೇಳಿದ್ದಾರೆ. ಈ ಮೂಲಕ ಡಿ.ಕೆ.ಶಿವಕುಮಾರ್ ಗೆ ಬೆಂಬಲ ನೀಡಿದ್ದಾರೆ.
ಸಿದ್ದರಾಮಯ್ಯನವರೇ ಮುಂದಿನ ಸಿಎಂ, ಸಿದ್ದರಾಮಯ್ಯ ಮಾಜಿ ಅಲ್ಲ ಭಾವಿ ಸಿಎಂ ಎಂಬ ಶಾಸಕ ಜಮೀರ್ ಅಹ್ಮದ್ ಹೇಳಿಕೆ ಬೆನ್ನಲ್ಲೇ ಕಾಂಗ್ರೆಸ್ ನ ಹಲವು ನಾಯಕರು ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದರು. ಕಾಂಗ್ರೆಸ್ ನಲ್ಲಿ ನಾಯಕತ್ವದ ಚರ್ಚೆ ಹೆಚ್ಚುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೆಹಲಿಗೆ ಪ್ರಯಾಣಿಸಿದ್ದು, ಹೈಕಮಾಂಡ್ ಗೆ ದೂರು ನೀಡಲು ಮುಂದಾಗಿದ್ದಾರೆ ಎಂಬ ಮಾತು ಕೇಳಿಬಂದಿದೆ. ಈ ನಡುವೆ ಪ್ರತಿಕ್ರಿಯೆ ನೀಡಿರುವ ಪರಮೇಶ್ವರ್, ಜಮೀರ್ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ ಎಂದಿದ್ದಾರೆ.
ಅಲ್ಲದೇ ಕಾಂಗ್ರೆಸ್ ನಲ್ಲಿ ಯಾರು ಅಧ್ಯಕ್ಷರೋ ಅವರೇ ಎಲ್ಲಾ ವ್ಯವಹಾರಗಳಿಗೆ ಸುಪ್ರೀಂ. ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಹೈಕಮಾಂಡ್ ನೇಮಕ ಮಾಡಿದ್ದು, ಅವರಿಕೆ ಅಧಿಕಾರ ಕೊಟ್ಟಿದೆ. ಹೀಗಾಗಿ ಪಕ್ಷಕ್ಕೆ ಅವರೇ ಸುಪ್ರೀಂ. ಡಿಕೆಶಿ ಹೇಗೆ ಹೇಳುತ್ತಾರೆ ಹಾಗೆ ಪಾಲಿಸಬೇಕಾಗುತ್ತದೆ. ನಮ್ಮಲ್ಲಿ ಯಾವುದೇ ಬಣ ರಾಜಕೀಯ ಭಿನ್ನಾಭಿಪ್ರಾಯಗಳಿಲ್ಲ. ಹಾಗೊಂದು ವೇಳೆ ಸಮಸ್ಯೆಯಾದರೆ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಸರಿಪಡಿಸುತ್ತಾರೆ ಎಂದು ಹೇಳಿದರು.
ಇದು ರಾಜಕೀಯ ಮಾಡುವ ಸಮಯವಲ್ಲ; ರಮೇಶ್ ಜಾರಕಿಹೊಳಿಗೆ ಟಾಂಗ್ ನೀಡಿದ ಬಿ.ಸಿ.ಪಾಟೀಲ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ