Karnataka NewsLatestPolitics

*ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಲೋಕಭವನಕ್ಕೆ ತೆರಳಿ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.

ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು. ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ, ಕೆ.ಸಿ.ವೇಣುಗೋಪಾಲ್, ರಣದೀಪ್ ಸುರ್ಜೆವಾಲಾ ಜೊತೆಗೂಡಿ ಲೋಕಭವನಕ್ಕೆ ತೆರಳಿದ ಡಿ.ಕೆ.ಶಿವಕುಮಾರ್ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಸಿಎಲ್ ಪಿ ಸಭೆಯಲ್ಲಿ ಆಯ್ಕೆಯಾದ ಬಗ್ಗೆ ಪತ್ರ ನೀಡಿ ಸರ್ಕಾರ ರಚನೆಯ ಹಕ್ಕು ಮಂಡಿಸಿದರು.

ಇದೇ ವೇಳೆ ಸರ್ಕಾರ ರಚಿಸಲು ಡಿ.ಕೆ.ಶಿವಕುಮಾರ್ ಅವರಿಗೆ ರಾಜ್ಯಪಾಲರು ಆಹ್ವಾನ ನೀಡಿದ್ದಾರೆ ಎಂದು ತಿಳಿದುಬಂದಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button