Election NewsKannada NewsKarnataka NewsPolitics

*ಮಗು ಅಪಹರಣದ ಆರೋಪ ಮಾಡಿರುವ  ದೇವೇಗೌಡರನ್ನು ಬಹಿರಂಗ ಚರ್ಚೆಗೆ ಆಹ್ವಾನಿಸಿದ ಡಿಕೆಶಿ *

ಪ್ರಗತಿವಾಹಿನಿ ಸುದ್ದಿ: 9 ವರ್ಷದ ಮಗುವನ್ನು ಅಪಹರಣ ಮಾಡಿ, ಅವರ ತಂದೆ-ತಾಯಿಯಿಂದ ಆಸ್ತಿಬರೆಸಿಕೊಳ್ಳಲಾಗಿದೆ ಎಂಬ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಆರೋಪದ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ಗರಂ ಆಗಿದ್ದಾರೆ.‌

Home add -Advt

ಈ ಕುರಿತು ಮಾದ್ಯಮಗಳ ಜೊತೆ ಮಾತನಾಡಿದ ಅವರು, ದೇವೇಗೌಡರ ಚಿಲ್ಲರೆ ಹೇಳಿಕೆಗಳಿಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಬಹಿರಂಗ ಚರ್ಚೆಗೆ ಆಹ್ವಾನ ಕೊಟ್ಟಿದ್ದೇನೆ. ತಾಕತ್ತಿದ್ದರೆ ಬಹಿರಂಗವಾಗಿ ಚರ್ಚೆಗೆ ಬರಲಿ. ಇಲ್ಲವಾದರೆ ಈ ಬಗ್ಗೆ ನಾನು ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದರು.

ಅವರಿಗೆ ತಾಕತ್ತಿದ್ದರೆ ಬೇರೆ ಯಾವುದೇ ವೇದಿಕೆಯಲ್ಲಿ ಚರ್ಚೆಗೆ ಬರಲಿ. ವಿಧಾನಸಭೆಯಲ್ಲೂ ಇದಕ್ಕೆ ಉತ್ತರಿಸುತ್ತೇನೆ ಎಂದು ತಿಳಿಸಿದರು. ಆರೋಪ ಮಾಡಿರುವ ಅವರು ಸಾಕ್ಷ್ಯವನ್ನು ಬಿಡುಗಡೆ ಮಾಡಲಿ, ನಾನು ತಪ್ಪು ಮಾಡಿದ್ದರೆ, ನಾನು ಯಾವುದೇ ಶಿಕ್ಷೆಯನ್ನು ಎದುರಿಸಲು ಸಿದ್ಧನಿದ್ದೇನೆ ಎಂದು ಸವಾಲು ಹಾಕಿದರು.

Related Articles

Back to top button