Kannada NewsKarnataka NewsLatestPolitics
*ತಮಿಳುನಾಡಿಗೆ ಹೆಚ್ಚುವರಿ ನೀರು; ಸರ್ವಪಕ್ಷ ಸಭೆ ಬಗ್ಗೆ ಡಿಸಿಎಂ ಹೇಳಿದ್ದೇನು?*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ತಮಿಳುನಾಡಿಗೆ ಹೆಚ್ಚುವರಿಯಾಗಿ ಕಾವೇರಿ ನೀರು ಬಿಡುಗಡೆ ಮಾಡಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಸರ್ವಪಕ್ಷಗಳ ಸಭೆ ಕರೆಯುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದರು. ಇದೀಗ ಈ ವಿಚಾರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಸರ್ವಪಕ್ಷಗಳ ಸಭೆ ಕರೆಯುವಂತೆ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿರುವುದರಲ್ಲಿ ತಪ್ಪಿಲ್ಲ. ನಾವೂ ಕೂಡ ಈ ನಿಟ್ಟಿನಲ್ಲಿ ಚಿಂತನೆ ನಡೆಸಿದ್ದೇವೆ ಎಂದಿದ್ದಾರೆ.
ಕಾವೇರಿ ನದಿ ವಿಚಾರ ಮಾತ್ರವಲ್ಲ ಮಹದಾಯಿ, ಕೃಷ್ಣಾ ಸೇರಿದಂತೆ ಪ್ರಮುಖ ವಿಚಾರಗಳ ಬಗ್ಗೆ ಸರ್ವಪಕ್ಷಗಳ ಸಭೆ ಕರೆದು ಚರ್ಚಿಸುವ ಕುರಿತು ಆಲೋಚನೆ ಮಾಡಿದ್ದೇವೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ