
ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಪ್ರಧಾನಿ ಮೋದಿ ಒಳ್ಳೆಯ ಖಾತೆ ಕೊಟ್ಟಿದ್ದಾರೆ. ಒಳ್ಳೆಯ ಅವಕಾಶ ಸಿಕ್ಕಿದೆ. ಹೀಗಿರುವಾಗ ರಾಜಕೀಯ ಮಾಡುವುದು, ಅನಗತ್ಯ ಆರೋಪ ಮಾಡುವುದನ್ನು ಬಿಟ್ಟು ಕೆಲಸ ಮಾಡಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಯೋಗಕ್ಕಿಂತ ಯೋಗಕ್ಷೇಮ ಮುಖ್ಯ. ಕುಮಾರಸ್ವಾಮಿಯವರಿಗೆ ಒಳ್ಳೆಯ ಖಾತೆ ಸಿಕ್ಕಿದೆ. ರಾಜ್ಯಕ್ಕೆ ದೊಡ್ಡ ಮಟ್ಟದಲ್ಲಿ 50 ಸಾವಿರ ಜನರಿಗೋ 1 ಲಕ್ಷ ಜನರಿಗೋ ಉದ್ಯೋಗ ಕೊಡುವ ಕೆಲಸ ಮಾಡಲಿ. ಅದನ್ನು ಬಿಟ್ಟು ರಾಜಕೀಯ ಮಾಡುತ್ತಾ ಕಾಲಹರಣ ಮಾಡುವುದನ್ನು ನಿಲ್ಲಿಸಲಿ. ನಮ್ಮ ಸರ್ಕಾರವೂ ಅವರಿಗೆ ಸಹಕಾರ ನೀಡುತ್ತದೆ ಎಂದರು.
ಬೆಂಗಳೂರಿಗೋ, ಬೀದರ್ ಗೋ , ಹಾಸನಕ್ಕೋ ಹೀಗೆ ರಾಜ್ಯಕ್ಕೆ ಒಂದು ದೊಡ್ಡ ಕೊಡುಗೆಯನ್ನು ಅವರ ಅವಧಿಯಲ್ಲಿ ನೀಡಲಿ . ಅದನ್ನು ಬಿಟ್ಟು ರಾಜಕೀಯವಾಗಿ ಮಾತನಾಡಿ ಯಾಕೆ ಒಳ್ಳೆಯ ಅವಕಾಶವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ