*KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಾಮಪತ್ರ ಸಲ್ಲಿಕೆ; ಕನಕಪುರದಲ್ಲಿ ಸಾಗರೋಪಾದಿಯಲ್ಲಿ ಹರಿದು ಬಂದ ಜನಸ್ತೋಮ*

ಘಟಾನುಘಟಿ ನಾಯಕರಿಂದ ನಾಮಿನೇಷನ್ ಫೈಲ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಚುನಾವಣ ಅಖಾಡ ರಂಗೇರಿದೆ. ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಬರಾಟೆ ಇಂದು ಜೋರಾಗಿದ್ದು, ಘಟಾನುಘಟಿ ನಾಯಕರು ನಾಮಪತ್ರ ಸಲ್ಲಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕನಕಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಬೃಹತ್ ರೋಡ್ ಶೋ ನಡೆಸಿದ್ದು, ಸಾಗರೋಪಾದಿಯಲ್ಲಿ ಜನಸ್ತೋಮ ಹರಿದು ಬಂದಿತು.

ಇನ್ನೊಂದೆಡೆ ಮೈಸೂರು ಜಿಲ್ಲೆ ವರುಣಾ ಕ್ಷೇತ್ರದಿಂದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿಯಿಂದ ಕಣಕ್ಕಿಳಿದಿರುವ ಸಚಿವ ವಿ.ಸೋಮಣ್ಣ ನಾಮಪತ್ರ ಸಲ್ಲಿಸಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಸೋಮಣ್ಣ ಅವರಿಗೆ ಸಾಥ್ ನೀಡಿದರು.

ಚೆನ್ನಪಟ್ಟಣ ಕ್ಷೇತ್ರದಿಂದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಹಾಸನ ಜಿಲ್ಲೆ ಹೊಳೆನರಸಿಪುರ ಕ್ಷೇತ್ರದಿಂದ ಮಾಜಿ ಸಚಿವ ಹೆಚ್.ಡಿ.ರೇವಣ್ಣ ನಾಮಪತ್ರ ಸಲ್ಲಿಸಿದರೆ ಹಾಸನ ಕ್ಷೇತ್ರದಿಂದ ಸ್ವರೂಪ್ ನಾಮಪತ್ರ ಸಲ್ಲಿಸಿದ್ದಾರೆ.

ಇದೇ ವೇಳೆ ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು. ಸೊರಬದಿಂದ ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ನಾಮಪತ್ರ ಸಲ್ಲಿಸಿದರೆ ಅದೇ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ದ್ಸಹೋದರ ಮಧು ಬಂಗಾರಪ್ಪ ನಾಮಪತ್ರ ಸಲ್ಲಿಸಿದ್ದಾರೆ.

ಇನ್ನೊಂದೆಡೆ ಬೆಂಗಳೂರಿನ ಮಲ್ಲೇಶ್ವರಂ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಚಿವ ಅಶ್ವತ್ಥನಾರಾಯಣ ನಾಮಪತ್ರ ಸಲ್ಲಿಸಿದರೆ, ಗಾಂಧಿನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ದಿನೇಶ್ ಗುಂಡೂರಾವ್ ನಾಮಪತ್ರ ಸಲ್ಲಿಸಿದರು.

https://pragati.taskdun.com/k-s-eshwarappajagadish-shettaropen-latter/


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button