ಡಿ.ಕೆ.ಶಿವಕುಮಾರ್ ಭೇಟಿಯಾದ ಹೆಚ್.ವಿಶ್ವನಾಥ್; ಮತ್ತೆ ಕಾಂಗ್ರೆಸ್ ನತ್ತ ಮುಖ ಮಾಡಿದ್ರಾ ಹಳ್ಳಿಹಕ್ಕಿ?
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಉರುಳಿಸಿ ಬಿಜೆಪಿ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹೆಚ್.ವಿಶ್ವನಾಥ್ ಇದೀಗ ಮತ್ತೆ ಕಾಂಗ್ರೆಸ್ ನತ್ತ ಚಿತ್ತ ಹರಿಸಿದಂತಿದೆ. ಬಿಜೆಪಿ ಸೇರ್ಪಡೆಯಾಗಿ ಉಪಚುನಾವಣೆಯಲ್ಲಿ ಸೋತರೂ ವಿಧಾನನ ಪರಿಷತ್ ಸದಸ್ಯ ಸ್ಥಾನ ನೀಡಿದ್ದರೂ ಸಮಾಧಾನವಾಗದ ಹೆಚ್. ವಿಶ್ವನಾಥ್ ಆಗಾಗ ಬಿಜೆಪಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಲೇ ಇದ್ದರು. ಈಗ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮತ್ತೆ ಪಕ್ಷಾಂತರಕ್ಕೆ ಸಜ್ಜಾಗಿದ್ದು, ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ಇದಕೆ ಪುಷ್ಠಿ ನೀಡುವಂತಿದೆ.
ಎರಡು ದಿನಗಳ ಹಿಂದೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದ ಹೆಚ್.ವಿಶ್ವನಾಥ್, ಇಂದು ಬೆಂಗಳೂರಿನ ಸದಾಶಿವನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.
ಈ ವೇಳೆ ವಿಧಾನ ಪರಿಷತ್ ವಿರೋಧ ಪಕ್ಷದ ಮಾಜಿ ನಾಯಕ ಎಸ್ ಆರ್ ಪಾಟೀಲ್ ಉಪಸ್ಥಿತರಿದ್ದರು.
ಕೆಲ ದಿನಗಳ ಹಿಂದಷ್ಟೇ ದೆಹಲಿಗೆ ತೆರಳಿದ್ದ ಬಿಜೆಪಿ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಅಚ್ಚರಿ ಮೂಡಿಸಿದ್ದರು.
ಇತ್ತೀಚೆಗೆ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿರುವ ಹೆಚ್. ವಿಶ್ವನಾಥ್ ಕಾಂಗ್ರೆಸ್ ನತ್ತ ಚಿತ್ತ ಹರಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಸೀನಿಯರ್ ಅಂತಾ ಗೆಲ್ಲದವರಿಗೂ ಟಿಕೆಟ್ ಕೊಡುವುದಲ್ಲ; ಗುಜರಾತ್ ಬಿಜೆಪಿ ಮಾದರಿ ಮೆಚ್ಚಿದ ಸತೀಶ್ ಜಾರಕಿಹೊಳಿ
https://pragati.taskdun.com/satish-jarakiholigujarath-modelcongresss-ticket/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ