LatestUncategorized

*BREAKING NEWS: ಮತ್ತೊಂದು ಅವಘಡ; ಡಿ.ಕೆ.ಶಿವಕುಮಾರ್ ಹೆಲಿಕಾಪ್ಟರ್ ನಿಂತಿದ್ದ ಜಾಗದ ಬಳಿಯೇ ಬೆಂಕಿ*

ಪ್ರಗತಿವಾಹಿನಿ ಸುದ್ದಿ; ಕಾರವಾರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತೆರಳುತ್ತಿದ್ದ ಹೆಲಿಕಾಪ್ಟರ್ ಗೆ ರಣಹದ್ದು ಬಡಿದು ಹೆಲಿಕಾಪ್ಟರ್ ಗಾಜು ಪುಡಿ ಪುಡಿಯಾಗಿದ್ದ ಘಟನೆ ಮಾಸುವ ಮುನ್ನವೇ ಮತ್ತೊಂದು ಅವಘಡ ಸಂಭವಿಸಿದೆ. ಡಿ.ಕೆ.ಶಿವಕುಮಾರ್ ಹೆಲಿಕಾಪ್ಟರ್ ಲ್ಯಾಂಡ್ ಆಗಿದ್ದ ಹೆಲಿಪಾಡ್ ನ ಪಕ್ಕದಲ್ಲಿಯೇ ಬೆಂಕಿ ಅವಘಡ ಸಂಭವಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಬಳಿಯ ರಾಮತೀರ್ಥ ಬಳಿ ನಡೆದಿದೆ.

ಡಿ.ಕೆ.ಶಿವಕುಮಾರ್ ಅವರು ಹೊನ್ನಾವರ ಬಳಿಯ ರಾಮತೀರ್ಥ ಹೆಲಿಪ್ಯಾಡ್ ಗೆ ಆಗಮಿಸಿದ್ದು, ಹೆಲಿಕಾಪ್ಟರ್ ನಿಲ್ಲಿಸಿದ್ದ ಜಾಗದ ಪಕ್ಕದಲ್ಲಿಯೇ ಬೆಂಕಿ ಹೊತ್ತಿಕೊಂಡಿದೆ. ಹೆಲಿಕಾಪ್ಟರ್ ಗೆ ಸಿಗ್ನಲ್ ಕೊಡುವ ಸ್ಮೋಕ್ ಕ್ಯಾಂಡಲ್ ನಿಂದಾಗಿ ಹಿಲಿಪ್ಯಾಡ್ ನ ಬಳಿ ಒಣಗಿದ ಹುಲ್ಲಿಗೆ ಬೆಂಕಿ ಹೊತ್ತಿಕೊಂಡು ಉರಿಯಲಾರಂಭಿಸಿದೆ.

ತಕ್ಷಣ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿದ್ದು, ಬೆಂಕಿ ನಂದಿಸಿದ್ದಾರೆ. ಅದೃಷವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.

https://pragati.taskdun.com/pm-narendra-modiroad-showbangalore-2/


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button