ಪ್ರಗತಿವಾಹಿನಿ ಸುದ್ದಿ; ಗದಗ: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ವಿಚಾರವಾಗಿ ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ಹೇಳಿಕೆ ನೀಡಿದ್ದ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಗದಗದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ‘ಯಾವನೋ ಈಶ್ವರಪ್ಪ ಅಂತೆ, ತಲೆ ಕೆಟ್ಟ ಈಶ್ವರಪ್ಪ’ ‘ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವ ಕಾಲ ಬರುತ್ತೆ’ ಅಂತಿದ್ದಾರೆ ಸಚಿವರಾದವರಿಗೆ ಜವಾಬ್ದಾರಿಗಳು ಬೇಡವೇ? ಜನಪ್ರತಿನಿಧಿಗಳು ಪ್ರಮಾಣವಚನ ಸ್ವೀಕರಿಸುವಾಗ ಏನೆಂದು ಪ್ರಮಾಣ ವಚನ ಸ್ವೀಕರಿಸುತ್ತೀರಿ ಎಂಬುದನ್ನು ಮರೆತಿದ್ದಿರೇನು? ಸಿಎಂ ಇಂತವರ ರಾಜೀನಾಮೆ ಪಡೆಯದೇ ಸುಮ್ಮನೆ ಕುಳಿತಿದ್ದಾರೆ ಎಂದು ಕಿಡಿ ಕಾರಿದ್ದಾರೆ.
‘ಆ ಬೊಮ್ಮಾಯಿ ಗವರ್ನರ್ ಇಟ್ಕೊಂಡು ಕೂತವ್ರೆ’, ಕಾಂಗ್ರೆಸ್ ಸರ್ಕಾರ ಇದ್ದಿದ್ದರೆ 10 ನಿಮಿಷದಲ್ಲಿ ಅವನ ರಾಜೀನಾಮೆ ಪಡೆಯುತ್ತಿದ್ದೆವು. ‘ಸಿಎಂ ಬಸವರಾಜ್ ಬೊಮ್ಮಾಯಿ ಒಂದು ಮಾತು ಆಡುತ್ತಿಲ್ಲ ಬಾಯಿಗೆ ಹೊಲಿಗೆ ಹಾಕಿಕೊಂಡಿದ್ದಾರೇನು?’ ಎಂದು ಪ್ರಶ್ನಿಸಿದ್ದಾರೆ.
ಇದೇ ವೇಳೆ ಪೊಲೀಸ್ ಇಲಾಖೆ ವಿರುದ್ಧವೂ ಗುಡುಗಿದ ಡಿ.ಕೆ.ಶಿವಕುಮಾರ್, ಎಲ್ಲವನ್ನು ನಾವು ಗಮನಿಸುತ್ತಿದ್ದೇವೆ. ಪೊಲೀಸರು ಬಿಜೆಪಿ ಕಾರ್ಯಕರ್ತರಂತೆ ವರ್ತಿಸುತ್ತಿದ್ದಾರೆ. ದೊಡ್ಡ ದೊಡ್ಡ ಅಧಿಕಾರಿಗಳಿಂದ ಹಿಡಿದು ಸಣ್ಣ ಅಧಿಕಾರಿಗಳವರೆಗೂ ಬಿಜೆಪಿ ಕಾರ್ಯಕರ್ತರಂತೆ ಕೆಲಸ ಮಾಡುತ್ತಿದ್ದಾರೆ ಎಂದು ಗುಡುಗಿದ್ದಾರೆ.
ವಾಹನ ಚಾಲನೆ ವೇಳೆ ಇನ್ಮೇಲೆ ಫೋನ್ ನಲ್ಲಿ ಮಾತಾಡಬಹುದು!
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ