ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಾನು ಸಚಿವ ಈಶ್ವರಪ್ಪ ಅವರ ರಾಜಿನಾಮೆ ಕೇಳುತ್ತಿಲ್ಲ, ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸುತ್ತಿದ್ದೇನೆ ಎಂದು ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ವಿಧಾನಸಭೆಯಲ್ಲಿ ಕಾಂಗ್ರೆಸ್ ನಾಯಕರು ಧರಣಿ ನಡೆಸಿದ್ದು, ನಮ್ಮ ಧರಣಿ ಇಂದೂ ಕೂಡ ಮುಂದುವರೆಯಲಿದೆ ಎಂದು ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ನಾನು ಆ ಬಚ್ಚಲು ಬಾಯಿ ಈಶ್ವರಪ್ಪ ರಾಜೀನಾಮೆ ಕೇಳುತ್ತಿಲ್ಲ, ಸಿಎಂ ಬೊಮ್ಮಾಯಿ, ರಾಜ್ಯಪಾಲರು ಈಶ್ವರಪ್ಪ ಅವರನ್ನು ಡಿಸ್ಮಿಸ್ ಮಾಡಲಿ. ರಾಜೀನಾಮೆ ಎಂಬುದು ಬಹಳ ಗೌರವಯುತವಾದ ಪದ. ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಈಶ್ವರಪ್ಪ ಅವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.
ದೊಡ್ಡ ಆಸ್ತಿವಂತ ಎಂದು ಈಶ್ವರಪ್ಪ ಅವರನ್ನು ಸ್ವೀಕರಿಸುತ್ತಿದ್ದೆ. ಬಿಜೆಪಿಯವರಿಗೆ ರಾಷ್ಟ್ರಧ್ವಜ ಎಂದರೇನೇ ಗೊತ್ತಿಲ್ಲ. ಕಾಂಗ್ರೆಸ್ ನವರು ಸ್ವಾತಂತ್ರ್ಯ ತಂದುಕೊಟ್ಟಿದ್ದಕ್ಕೆ ಇಂದು ಬಿಜೆಪಿಯವರು ಸಿಎಂ ಆಗಿದ್ದಾರೆ. ತಕ್ಷಣ ಈಶ್ವರಪ್ಪ ಅವರನ್ನು ವಜಾಗೊಳಿಸಬೇಕು. ಇಲ್ಲವಾದಲ್ಲಿ ಸೋಮವಾರದಿಂದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ, ಜಿಲ್ಲಾ ಕೇಂದ್ರಗಳಲ್ಲೂ ಕಾಂಗ್ರೆಸ್ ಕಾರ್ಯಕರ್ತರು ರಾಷ್ಟ್ರಧ್ವಜ ಹಿಡಿದು ಹೋರಾಟ ನಡೆಸಲಿದ್ದಾರೆ ಎಂದು ಎಚ್ಚರಿಸಿದರು.
ಕಾಂಗ್ರೆಸ್ಸಿಗರ ಮನವೊಲಿಸಲು ಸಿಎಂ, ಸ್ಪೀಕರ್, ಬಿಎಸ್ವೈ ಯತ್ನ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ