Latest

ಡಿ.ಕೆ.ಶಿವಕುಮಾರ್ ಮನೆಗೆ ಕಾರ್ತಿ ಚಿದಂಬರಂ ಭೇಟಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೇಂದ್ರ ಮಾಜಿ ಸಚಿವ ಚಿದಂಬರಂ ಅವರ ಪುತ್ರ, ಸಂಸದ, ಉದ್ಯಮಿ ಕಾರ್ತಿ ಚಿದಂಬರಂ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಬೆಂಗಳೂರಿನ ಸದಾಶಿವನಗರ ನಿವಾಸಕ್ಕೆ ಆಗಮಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಡಿ.ಕೆ.ಶಿವಕುಮಾರ್ ಅವರ ನಿವಾಸದ ಮೇಲೆ ಸಿಬಿಐ ದಾಳಿ ಬೆನ್ನಲ್ಲೇ ಕಾರ್ತಿ ಚಿದಂಬರಂ ಅವರ ಈ ಭೇಟಿ ಕುತೂಹಲ ಮೂಡಿಸಿದೆ.

Home add -Advt

ಕಾರ್ತಿ ಚಿದಂಬರಂ ಅವರ ಭೇಟಿ ಬಗ್ಗೆ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್, ಕಾರ್ತಿ ಚಿದಂಬರಂ ಅವರದ್ದು ಕೇವಲ ಸೌಜನ್ಯದ ಭೇಟಿ. ರಾಜಕೀಯ ವಿಶೇಷತೆಗಳೇನೂ ಇಲ್ಲ. ಅವರು ನನ್ನ ಸ್ನೇಹಿತರು. ಸಂಸತ್ ಸದಸ್ಯರಾಗಿರುವ ಅವರು ರಾಜಕೀಯವಾಗಿ ಸಹೋದ್ಯೋಗಿ. ಹೀಗಾಗಿ ನಾವು ಭೇಟಿಯಾದಾಗ ನಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತೇವೆ ಅಷ್ಟೇ ಎಂದು ತಿಳಿಸಿದರು.

Related Articles

Back to top button