LatestUncategorized

*ಕುತೂಹಲ ಕೆರಳಿಸಿದ ಡಿ.ಕೆ.ಶಿವಕುಮಾರ್- ನಟ ಕಿಚ್ಚ ಸುದೀಪ್ ಭೇಟಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗೆಲುವಿಗಾಗಿ ಶ್ರಮಿಸುತ್ತಿರುವ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯಲು ನಾನಾ ಕಸರತ್ತು ನಡೆಸಿದೆ. ಇದರ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಟ ಕಿಚ್ಚ ಸುದೀಪ್ ಅವರನ್ನು ಭೇಟಿಯಾಗಿರುವುದು ಕುತೂಹಲವನ್ನು ಇಮ್ಮಡಿಗೊಳಿಸಿದೆ.

ಕಿಚ್ಚ ಸುದೀಪ ಈ ಬಾರಿ ರಾಜಕೀಯಕ್ಕೆ ಪದಾರ್ಪಣೆ ಮಾಡಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಈ ವದಂತಿಗಳ ಬೆನ್ನಲ್ಲೇ ಈಗ ಡಿ.ಕೆ.ಶಿವಕುಮಾರ್ ಅವರು ಸುದೀಪ್ ಅವರನ್ನು ಭೇಟಿಯಾಗಿರುವುದು ಹೊಸ ಚರ್ಚೆಗೆ ಗ್ರಾಸವಾಗಿದೆ.

ನಿನ್ನೆ ರಾತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕಿಚ್ಚಾ ಸುದೀಪ್ ಭೇಟಿಯಾಗಿ ಒಟ್ಟಿಗೆ ಭೋಜನ ಸವಿದಿದ್ದಾರೆ. ಕೆಲ ಕಾಲ ಇಬ್ಬರೂ ಸಮಾಲೋಚನೆ ನಡೆಸಿದ್ದಾರೆ. ಈ ವೇಳೆ ಡಿ.ಕೆ.ಶಿವಕುಮಾರ್, ಸುದೀಪ್ ಅವರನ್ನು ಚುನಾವಣಾ ಪ್ರಚಾರ ಸಭೆಗೆ ಬರುವಂತೆ ಆಹ್ವಾನ ನೀಡಿದ್ದಾರೆ.

ಒಟ್ಟಾರೆ ಕಿಚ್ಚ ಸುದೀಪ್ ರಾಜಕೀಯಕ್ಕೆ ಎಂಟ್ರಿ ಕೊದಲಿದ್ದಾರೆ ಎಂಬ ಚರ್ಚೆಯ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಹಾಗೂ ಕಿಚ್ಚ ಸುದೀಪ್ ಭೇಟಿ ಮಹತ್ವ ಪಡೆದಿದ್ದು, ಮುಂದಿನ ದಿನಗಳಲ್ಲಿ ಸುದೀಪ್ ನಡೆ ಕುತೂಹಲಕ್ಕೆ ಕಾರಣವಾಗಿದೆ.

Home add -Advt

*50 ದಿನಗಳ ಬಳಿಕ BJP ಸರ್ಕಾರ ಇರಲ್ಲ ಎಂದ ಡಿ.ಕೆ.ಶಿವಕುಮಾರ್*

https://pragati.taskdun.com/d-k-shivakumarreactionvidhanasabha-election-2/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button