*ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಕುಮಾರಸ್ವಾಮಿಗೆ ಸಾಲು ಸಾಲು ಪ್ರಶ್ನೆ ಮುಂದಿಟ್ಟ ಡಿ.ಕೆ.ಶಿವಕುಮಾರ್*

ಕೋಲಾರದ ಇತಿಹಾಸ ಇಡೀ ದೇಶಕ್ಕೆ ಮಾದರಿಯಾಗಿದೆ. ಇಲ್ಲಿನ ಜನ ಶ್ರಮಜೀವಿಗಳು. ಬೆಂಗಳೂರು, ಕರ್ನಾಟಕ ರಾಜ್ಯಕ್ಕೆ ಹಾಲು, ತರಕಾರಿ, ರೇಷ್ಮೆ ಕೊಡುವ ಜನ. ಒಂದು ಕಾಲದಲ್ಲಿ ಚಿನ್ನ ಕೊಟ್ಟಂತಹ ಜನ. ನಿಮ್ಮ ತ್ಯಾಗ, ಹಿರಿಯರ ಹೋರಾಟ ನಾವ್ಯಾರೂ ಮರೆಯಲು ಸಾಧ್ಯವಿಲ್ಲ. ಲಕ್ಷಾಂತರ ಮಂದಿ ಬೆಂಗಳೂರಿನಲ್ಲಿ ಉದ್ಯೋಗ ಮಾಡಿ ಶ್ರಮಿಸುತ್ತಿದ್ದೀರಿ. ಕೋಲಾರದಲ್ಲಿ ಜನವರಿಯಾದರೂ ಹಸಿರು ಕಾಣುತ್ತಿದೆ. ಇದಕ್ಕೆ ಕಾರಣ ಏನು ಎಂದು ಅರ್ಥ ಮಾಡಿಕೊಳ್ಳುವ ಶಕ್ತಿಯನ್ನು ಭಗವಂತ ನಿಮಗೆ ಕೊಟ್ಟಿದ್ದಾನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.