Karnataka NewsLatestPolitics

*ಮತದಾರರ ಹಕ್ಕು ರಕ್ಷಣೆ ರಾಜಕೀಯ ಪಕ್ಷಗಳ ಕರ್ತವ್ಯ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಮತಗಳ್ಳತನ ವಿಚಾರವನ್ನು ನಮ್ಮ ಹೈಕಮಾಂಡ್ ನಾಯಕರು ಗಂಭೀರವಾಗಿ ಪರಿಗಣಿಸಿದ್ದು, ಮತದಾರರ ಹಕ್ಕಿನ ರಕ್ಷಣೆ ಮಾಡಬೇಕಾಗಿರುವುದು ರಾಜಕೀಯ ಪಕ್ಷಗಳ ಕರ್ತವ್ಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಕೆಪಿಸಿಸಿ ಕಚೇರಿ ಆವರಣದಲ್ಲಿ ಬುಧವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು.

ಆಗಸ್ಟ್ 8ರಂದು ನಡೆಯಲಿರುವ ಪ್ರತಿಭಟನೆ ಬಗ್ಗೆ ಕೇಳಿದಾಗ, “ನಮ್ಮ ಮೈತ್ರಿ ನಾಯಕ ಶಿಬು ಸೊರೇನ್ ಅವರ ನಿಧನವಾದ ಕಾರಣಕ್ಕೆ ಆಗಸ್ಟ್ 5ರಂದು ನಡೆಸಬೇಕಾಗಿದ್ದ ಪ್ರತಿಭಟನೆಯನ್ನು ಆಗಸ್ಟ್ 8ಕ್ಕೆ ಮುಂದೂಡಲಾಯಿತು. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು 8ರ ಬೆಳಗ್ಗೆ 10.30ಕ್ಕೆ ಆಗಮಿಸಲಿದ್ದು, ಚುನಾವಣೆ ಸಮಯದಲ್ಲಿ ಆಗಿರುವ ಅಕ್ರಮಗಳ ಬಗ್ಗೆ ದಾಖಲೆಗಳ ಸಮೇತ ಆಯೋಗಕ್ಕೆ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡುತ್ತೇವೆ” ಎಂದು ತಿಳಿಸಿದರು.

Home add -Advt

ಆಯೋಗಕ್ಕೆ ಯಾವ ದಾಖಲೆಗಳನ್ನು ನೀಡುತ್ತೀರಿ ಎಂದು ಕೇಳಿದಾಗ, “ಈ ವಿಚಾರವನ್ನು ನಾನು ಬಹಿರಂಗಪಡಿಸುವುದಿಲ್ಲ. ಇದು ರಾಷ್ಟ್ರೀಯ ವಿಚಾರ ಆಗಿರುವ ಹಿನ್ನೆಲೆಯಲ್ಲಿ ನಮ್ಮ ನಾಯಕರು ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಲಿದ್ದಾರೆ” ಎಂದು ತಿಳಿಸಿದರು.

ಮೆರವಣಿಗೆ ನಡೆಯಲಿದೆಯೇ ಎಂದು ಕೇಳಿದಾಗ, “ಸ್ವಾತಂತ್ರ್ಯ ಉದ್ಯಾನದಲ್ಲಿ ಕಾನೂನು ಚೌಕಟ್ಟಿನಲ್ಲಿ ಪ್ರತಿಭಟನೆ ನಡೆಯಲಿದೆ” ಎಂದು ತಿಳಿಸಿದರು.

Related Articles

Back to top button