ಹೂವಿನ ಮಾಲೆ, ಬೊಕ್ಕೆಗಳಿಗಾಗಿ ಹಣವನ್ನು ವ್ಯರ್ಥ ಮಾಡಬೇಡಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪಕ್ಷ ತಮ್ಮ ಮೇಲೆ ನಂಬಿಕೆ ಇಟ್ಟು ಜವಾಬ್ದಾರಿ ನೀಡಿದೆ. ಪಕ್ಷವನ್ನು ಕಟ್ಟುವ ಸಂಪೂರ್ಣ ಜವಾಬ್ದಾರಿ ನಮ್ಮ ಮೇಲಿದ್ದು, ಅದನ್ನು ಯಶಸ್ವಿಯಾಗಿ ನಿರ್ವಹಿಸುತ್ತೇನೆ. ಎಲ್ಲರೂ ಒಗ್ಗಟ್ಟಾಗಿ ಪಕ್ಷವನ್ನು ಹೇಗೆ ಕಟ್ಟುತ್ತೇವೆ ಎಂಬುದನ್ನು ನೀವೇ ನೋಡಿ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್​​ನಲ್ಲಿ ಯಾವುದೇ ಸಮಸ್ಯೆಯಿಲ್ಲ. ಪಕ್ಷದಲ್ಲಿ ಸಮಸ್ಯೆ ಇದೆ ಅಂದುಕೊಂಡರೆ ಇದೆ. ಸಮಸ್ಯೆ ಇಲ್ಲ ಅಂದುಕೊಂಡರೆ ಇಲ್ಲ. ನನಗೆ ಇದೆಲ್ಲವೂ ಕಷ್ಟವಲ್ಲ, ಸಮಸ್ಯೆಯೂ ಅಲ್ಲ. ಹೇಗೆ ಪಕ್ಷ ಕಟ್ಟುತ್ತೇವೆ ಎಂದು ನೀವೇ ನೋಡುತ್ತೀರಾ ಎಂದರು.

ಕೆಪಿಸಿಸಿ ಅಧ್ಯಕ್ಷರಾದ ಹಿನ್ನೆಲೆಯಲ್ಲಿ ಡಿ.ಕೆ ಶಿವಕುಮಾರ್ ಅವರಿಗೆ ಶುಭಕೋರಲು ನಾಯಕರು ಹಾಗೂ ಅಭಿಮಾನಿಗಳ ದಂಡು ಹರಿದು ಬರುತ್ತಿದೆ. ಈ ಕುರಿತು ಮಾತನಾಡಿದ ಅವರು ದಯವಿಟ್ಟು ಹೂವಿನ ಮಾಲೆ, ಬೊಕ್ಕೆ ತರಬೇಡಿ. ಅನಗತ್ಯವಾಗಿ ಕಾರ್ಯಕರ್ತರು ಹಣವನ್ನು ವ್ಯರ್ಥ ಮಾಡಬೇಡಿ. ಬೂತ್​ಮಟ್ಟದಿಂದ ನಾವು ಪಕ್ಷವನ್ನು ಕಟ್ಟಬೇಕಿದೆ. ನಿಮ್ಮ ಹಣವನ್ನು ಹೂಗಳಿಗೆ ವ್ಯರ್ಥ ಮಾಡಬೇಡಿ ಎಂದು ತಿಳಿಸಿದ್ದಾರೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button