ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಚನೆಯಾಗಿರುವ ಬೆನ್ನಲ್ಲೇ ನೂತನ ಸಚಿವರಿಗೆ ಖಾತೆ ಹಂಚಿಕೆ ಕಸರತ್ತು ಆರಂಭವಾಗಿದೆ. ಒಂದೆಡೆ ಸಚಿವಸ್ಥಾನದ ಆಕಾಂಕ್ಷಿಗಳು ಮಂತ್ರಿ ಸ್ಥಾನಕ್ಕಾಗಿ ಪೈಪೋಟಿ ನಡೆಸಿದ್ದರೆ ಇನ್ನೊಂದೆಡೆ ಸಚಿವರು ಪ್ರಬಲ ಖಾತೆಗಾಗಿ ಲಾಭಿ ನಡೆಸಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಎಂ.ಬಿ.ಪಾಟೀಲ್ ಇಬ್ಬರೂ ಜಲಸಂಪನ್ಮೂಲ ಖಾತೆಗಾಗಿ ಲಾಭಿ ನಡೆಸಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ನೀರಾವರಿ ಯೋಜನೆಗಳು ಹೆಚ್ಚಿರುವುದರಿಂದ ಜಲಸಂಪನ್ಮೂಲ ಖಾತೆ ಮೇಲೆ ಎಂ.ಬಿ.ಪಾಟೀಲ್ ಕಣ್ಣಿಟ್ಟಿದ್ದಾರೆ.
ಇತ್ತ ಮೇಕೆದಾಟು ಯೋಜನೆಯನ್ನು ಜಾರಿ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಡಿ.ಕೆ.ಶಿವಕುಮಾರ್ ಕೂಡ ಜಲಸಂಪನ್ಮೂಲ ಖಾತೆಗಾಗಿ ಬಿಗಿಪಟ್ಟು ಹಿಡಿದಿದ್ದಾರೆ. ಉಬಯನಾಯಕರ ಲಾಭಿಯಿಂದಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಹೈಕಮಾಂಡ್ ಚಿಂತೆಗೀಡಾಗಿದ್ದಾರೆ ಎನ್ನಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ