*ಮುಹಾಕುಂಭ ಮೇಳಕ್ಕೆ ಆಗಮಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ ರನ್ನು ಆತ್ಮೀಯವಾಗಿ ಸ್ವಾಗತಿಸಿದ ಉತ್ತರ ಪ್ರದೇಶ ಸಚಿವ*

ಪ್ರಗತಿವಾಹಿನಿ ಸುದ್ದಿ: ಡಿಸಿಎಂ ಡಿ.ಕೆ.ಶಿವಕುಮಾರ್ ಕುಟುಂಬ ಸಮೇತರಾಗಿ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಾಹಾಕುಂಭ ಮೇಳಕ್ಕೆ ತೆರಳಿದ್ದಾರೆ. ಕುಂಭಮೇಳಕ್ಕೆ ಆಗಮಿಸಿದ ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಅವರನ್ನು ಉತ್ತರ ಪ್ರದೇಶ ಕೈಗಾರಿಕೆ ಸಚಿವ ನಂದಗೋಪಾಲ ಗುಪ್ತಾ ಅವರು ಪ್ರಯಾಗ್ ರಾಜ್ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ಹೂಗುಚ್ಛ ನೀಡಿ ಸ್ವಾಗತಿಸಿದರು. *ಕುಂಭಮೇಳಕ್ಕೆ ಪ್ರಯಾಣ ಬೆಳೆಸಿದ ಡಿಸಿಎಂ ಡಿ.ಕೆ.ಶಿವಕುಮಾರ್*