*ಕೆ.ಸಿ.ವೇಣುಗೋಪಾಲ್ ಭೇಟಿಯಾದ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಬೆಗಳೂರಿಗೆ ವಾಪಾಸ್ ಆಗಿದ್ದಾರೆ. ಇನ್ನೊಂದೆಡೆ ದೆಹಲಿಯಲ್ಲೇ ಬೀಡುಬಿಟ್ಟಿರುವ ಡಿ.ಕೆ ಶಿವಕುಮಾರ್, ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಬಳಿಕ ಡಿ.ಕೆ.ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿಯಾದರು. ಹೊಸ ಸರ್ಕಾರ ರಚನೆ ಬಗ್ಗೆ ಚರ್ಚೆ ನಡೆಸಿದರು. *ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಡಿ.ಕೆ.ಶಿವಕುಮಾರ್*