Film & EntertainmentKannada NewsKarnataka NewsLatest

*ಹಿರಿಯ ನಟಿ ಲೀಲಾವತಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಡಾ.ಲೀಲಾವತಿ ಅನಾರೋಗ್ಯದಿಂದ ಬಳಲುತ್ತಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಲೀಲಾವತಿ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ಲೀಲಾವತಿ ತೀವ್ರ ಅನಾರೋಗ್ಯಕ್ಕೀಡಾಗಿದ್ದು, ಬೆಂಗಳೂರಿನ ನೆಲಮಂಗಲ ಬಳಿಯ ಸೋಲದೇವನಹಳ್ಳಿ ತೋಟದ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

Home add -Advt

ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸೋಲದೇವನಹಳ್ಳಿಯಲ್ಲಿರುವ ಲೀಲಾವತಿ ಅವರ ತೋಟದ ಮನೆಗೆ ಮಂಗಳವಾರ ತೆರಳಿ, ಅವರ ಅರೋಗ್ಯ ಸ್ಥಿತಿ ವಿಚಾರಿಸಿದರು. ಲೀಲಾವತಿ ಅವರ ಪುತ್ರ, ನಟ ವಿನೋದ್ ರಾಜ್, ಸ್ಥಳೀಯ ಶಾಸಕ ಎನ್ ಶ್ರೀನಿವಾಸ್, ಎಂಎಲ್ ಸಿ ರವಿ ಮತ್ತಿತರರು ಉಪಸ್ಥಿತರಿದ್ದರು.

Related Articles

Back to top button