*ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಬೆಂಗಳೂರಿನಲ್ಲಿರುವ ಹೆಚ್ಎಎಲ್, ಜಕ್ಕೂರು, ವಾಯುನೆಲೆ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಕಟ್ಟಡ ಎತ್ತರದ ಮಿತಿಯಿಂದ ಅಭಿವೃದ್ಧಿ ಕಾಮಗಾರಿಗೆ ತೊಡಕಾಗಿದ್ದು, ಈ ಮಿತಿಯ ಬಗ್ಗೆ ಪರಿಶೀಲನೆ ನಡೆಸುವಂತೆ ಕೇಂದ್ರ ನಾಗರೀಕ ವಿಮಾನಯಾನ ಸಚಿವರಿಗೆ ಮನವಿ ಮಾಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಹಿತಿ ನೀಡಿದರು.
ಕೇಂದ್ರ ವಿಮಾನಯಾನ ಸಚಿವರಾದ ರಾಮ್ ಮೋಹನ್ ನಾಯ್ಡು ಅವರನ್ನು ಭೇಟಿ ಮಾಡಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳನ್ನು ಉದ್ದೇಶಿಸಿ ಬುಧವಾರ ಮಾತನಾಡಿದರು.
“ಸಚಿವರೊಂದಿಗೆ ನಾಗರೀಕ ವಿಮಾನಯಾನ ಸಚಿವಾಲಯ ಹಾಗೂ ಹೆಚ್ಎಎಲ್ ನಿಂದ ಎತ್ತರದ ಮಿತಿ ಬಗ್ಗೆ ಚರ್ಚೆ ಮಾಡಿದೆವು. ಹೈದರಾಬಾದ್, ಮುಂಬೈ ಸೇರಿದಂತೆ ಬೇರೆ ಕಡೆಗಳಲ್ಲಿ ಮಿತಿ ಕಡಿಮೆ ಇದೆ. ಬೇರೆ ನಗರಗಳಲ್ಲಿ ಅರುವಂತೆ ಬೆಂಗಳೂರಿನಲ್ಲೂ ಎತ್ತರದ ಮಿತಿ ಇರಬೇಕು ಎಂದು ಮನವಿ ಮಾಡಿದ್ದೇವೆ. ಈ ಕಟ್ಟಡ ಎತ್ತರದ ಮಿತಿಯಿಂದಾಗಿ ಬೆಂಗಳೂರಿನಲ್ಲಿ ನಾಗರೀಕರು ಪ್ರೀಮಿಯಂ ಎಫ್ಎಆರ್ ತೆಗೆದುಕೊಳ್ಳಲು ಹಿಂಜರಿಯುತ್ತಿದ್ದಾರೆ. ಇದರಿಂದ ಸರ್ಕಾರಕ್ಕೂ ಹಣ ಬರುತ್ತಿಲ್ಲ. ಕೇಂದ್ರ ಸರ್ಕಾರವೇ ಎಫ್ಎಆರ್ ಕಡಿಮೆ ಮಾಡಿ ಪ್ರೀಮಿಯಂ ಎಫ್ಐಆರ್ ಹೆಚ್ಚಿಸಿ ಎಂದು ಹೇಳುತ್ತದೆ. ಹೀಗಾಗಿ ನಾವು ಅನೇಕ ತೀರ್ಮಾನ ಮಾಡಬೇಕಿದ್ದು, ಈ ನಿಟ್ಟಿನಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಚರ್ಚಿಸಿರುವೆ. ಅವರು ರಕ್ಷಣಾ ಮಂತ್ರಿ ಜತೆಗೆ ಮಾತನಾಡುವುದಾಗಿ ತಿಳಿಸಿದ್ದಾರೆ. ನಮ್ಮ ಅಧಿಕಾರಿಗಳು ಹೆಚ್ಎಎಲ್ ಜತೆ ಚರ್ಚೆ ಮಾಡಿದ್ದಾರೆ. ನಾನು ಕೂಡ ರಕ್ಷಣಾ ಸಚಿವರ ಭೇಟಿಗೆ ಸಮಯ ತೆಗೆದುಕೊಂಡು ನಮ್ಮ ಈ ಸಮಸ್ಯೆಗಳನ್ನು ಅವರಿಗೆ ವಿವರಿಸುತ್ತೇನೆ. ಬೆಂಗಳೂರಿನ ಅಭಿವೃದ್ಧಿಗಾಗಿ ನಾವು ಒಂದು ಪರಿಹಾರ ಕಂಡುಕೊಳ್ಳುತ್ತೇವೆ” ಎಂದು ತಿಳಿಸಿದರು.
“ನಾನು, ಸಚಿವರಾದ ಬೋಸರಾಜು, ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಅವರು ಇಂದು ನಾಗರೀಕ ವಿಮಾನಯಾನ ಸಚಿವರನ್ನು ಭೇಟಿ ಮಾಡಿದೆವು. ಬೆಂಗಳೂರು ಬೆಳವಣಿಗೆ ಹಾಗೂ ಸಂಚಾರ ದಟ್ಟಣೆ ನಿವಾರಣೆ ಮಾಡಬೇಕಿದೆ. ಹೊರವಲಯದಲ್ಲಿ ಬಡಾವಣೆಗಳು ಹೆಚ್ಚುತ್ತಿವೆ. ಅಲ್ಲೆಲ್ಲಾ ವಾಹನಗಳ ಸಂಖ್ಯೆ ಹೆಚ್ಚಾಗಿವೆ. ಬೆಂಗಳೂರು ನಗರದಲ್ಲಿ ಹೆಚ್ಎಎಲ್, ಜಕ್ಕೂರು, ಯಲಹಂಕದ ವಾಯುನೆಲೆ ಹಾಗೂ ದೇವನಹಳ್ಳಿಯಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣವಿದೆ. ಈ ಸುತ್ತಮುತ್ತಲ ಪ್ರದೇಶದಲ್ಲಿ ಎತ್ತರದ ಕಟ್ಟಡ ನಿರ್ಮಾಣ ಸಾಧ್ಯವಾಗುವುದಿಲ್ಲ” ಎಂದರು.
ಸರ್ಕಾರಕ್ಕೆ ಸಹಕಾರ ನೀಡದ ನೈಸ್ ಸಂಸ್ಥೆಗೆ ತಕ್ಕ ಉತ್ತರ:
“ನಾನು ಸ್ಕೈಡೆಕ್ ಮಾಡಲು ಎರಡೂವರೆ ವರ್ಷಗಳಿಂದ ಪ್ರಯತ್ನಪಟ್ಟ ಬಳಿಕ ಈಗ ಕೆಂಪೇಗೌಡ ಲೇಔಟ್ ನಲ್ಲಿ ನಿರ್ಮಿಸಲು ಮುಂದಾಗಿದ್ದೇವೆ. ವಿಮಾನ ನಿಲ್ದಾಣ ಸುತ್ತಮುತ್ತ 20 ಕಿ.ಮೀ ದೂರದಲ್ಲಿ ಇದನ್ನು ಮಾಡಲು ಸಾಧ್ಯವಿಲ್ಲ. ಎನ್ ಜಿಎಫ್ ಬಳಿ ಸ್ಕೈಡೆಕ್ ಮಾಡಲು ಜಾಗ ಉತ್ತಮವಾಗಿತ್ತು. ಮೆಟ್ರೋ ಸೌಲಭ್ಯವಿತ್ತು. ಜತೆಗೆ ನೈಸ್ ರಸ್ತೆ ಬಳಿ ಸೋಂಪುರ ವೃತ್ತದ ಬಳಿ ನಿರ್ಮಾಣಕ್ಕೆ ಸಲಹೆ ನೀಡಿದ್ದರು. ಆದರೆ ನೈಸ್ ಸಂಸ್ಥೆಯವರು ಸಹಕಾರ ನೀಡಲಿಲ್ಲ. ನೈಸ್ ಸಂಸ್ಥೆ ವಿಚಾರವಾಗಿ ಏನು ಮಾಡಬೇಕು ಎಂದು ಮುಂದೆ ತೀರ್ಮಾನ ಮಾಡುತ್ತೇವೆ. ಅವರು ನಿರಾಕ್ಷೇಪಣ ಪತ್ರವನ್ನು ನೀಡಲಿಲ್ಲ. ಸರ್ಕಾರಕ್ಕೆ ಸಹಕಾರ ನೀಡದವರಿಗೆ ತಕ್ಕ ಉತ್ತರ ನೀಡಬೇಕಾಗುತ್ತದೆ” ಎಂದು ಹೇಳಿದರು.
“ಅಂತರರಾಷ್ಟ್ರೀಯ ಮಟ್ಟದಲ್ಲಿರುವ ಮಾರ್ಗಸೂಚಿ ಹಾಗೂ ದೇಶದ ಇತರೆ ನಗರಗಳಲ್ಲಿ ಇರುವ ಮಾರ್ಗಸೂಚಿ ಬಗ್ಗೆ ಅಧ್ಯಯನ ಮಾಡುತ್ತಿರುವುದಾಗಿ ಕೇಂದ್ರ ಸಚಿವರು ತಿಳಿಸಿದ್ದಾರೆ. ಮುಂದಿನ ಒಂದು ವಾರದಲ್ಲಿ ಸಭೆ ನಡೆಸುವುದಾಗಿ ತಿಳಿಸಿದ್ದಾರೆ. ನಮ್ಮ ಅಧಿಕಾರಿಗಳಿಗೂ ಭಾಗವಹಿಸಲು ಹೇಳಿದ್ದಾರೆ. ಬೆಂಗಳೂರು ಬಿಸಿನೆಸ್ ಕಾರಿಡಾರ್ ಬರುತ್ತಿದ್ದು, ಭೂ ಸಂತ್ರಸ್ತರು ತಮ್ಮ ಜಾಗದಲ್ಲಿ ಕಟ್ಟಡ ನಿರ್ಮಾಣ ಮಾಡಿಕೊಳ್ಳಲು ಮುಂದಾಗುತ್ತಾರೆ. ಅವರಿಗೆ ಎತ್ತರದ ಮಿತಿ ಇದ್ದರೆ ಕಷ್ಟವಾಗುತ್ತದೆ” ಎಂದು ತಿಳಿಸಿದರು.
ಎರಡನೇ ವಿಮಾನ ನಿಲ್ದಾಣದ ಬಗ್ಗೆ ರಾಜ್ಯ ಸರ್ಕಾರ ಚರ್ಚಿಸಿ ತೀರ್ಮಾನ
“ಇನ್ನು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ವಿಚಾರವಾಗಿ ಕೇಂದ್ರ ಸರ್ಕಾರ ತಮ್ಮ ಅಭಿಪ್ರಾಯ ಕಳುಸಿದ್ದು, ನೀವೇ ಜಾಗ ನಿಗದಿ ಮಾಡಿ ಎಂದು ಹೇಳಿದೆ. ನಮ್ಮ ಬಳಿ ಎರಡು ಮೂರು ಆಯ್ಕೆಗಳಿದ್ದು, ನಮ್ಮ ಸರ್ಕಾರ ಇದರ ಸಾಧಕ ಬಾಧಕಗಳನ್ನು ಚರ್ಚೆ ಮಾಡಿ ತೀರ್ಮಾನ ಮಾಡಲಿದೆ. ನಾನು ಬೆಂಗಳೂರಿಗೆ ವಾಪಸ್ಸಾದ ಬಳಿಕ ಕೇಂದ್ರ ಸರ್ಕಾರ ಕಳುಹಿಸಿರುವ ಅಭಿಪ್ರಾಯ ಪರಿಶೀಲನೆ ಮಾಡುತ್ತೇನೆ. ನಾನು ಬೆಂಗಳೂರು ದೃಷ್ಟಿಯಿಂದ ಈ ವಿಚಾರವನ್ನು ಕೇಂದ್ರ ಸಚಿವರ ಜತೆ ಪ್ರಸ್ತಾಪಿಸಿದೆ. ಈ ವಿಮಾನ ನಿಲ್ದಾಣ ನಿರ್ಮಾಣದ ಜವಾಬ್ದಾರಿ ಸಚಿವರಾದ ಎಂ.ಬಿ. ಪಾಟೀಲ್ ಅವರು ನೋಡಿಕೊಳ್ಳುತ್ತಾರೆ” ಎಂದರು.
ಪ್ರಶ್ನೋತ್ತರ:
ರಕ್ಷಣಾ ಇಲಾಖೆ ಜತೆ ಅನೇಕ ವರ್ಷಗಳಿಂದ ಮನವಿ ಇಟ್ಟಿದ್ದರೂ ಅವರು ಸಹಕಾರ ನೀಡುತ್ತಿಲ್ಲ ಎಂದು ಕೇಳಿದಾಗ, “ಇಲ್ಲ, ಕೇಂದ್ರ ರಕ್ಷಣಾ ಇಲಾಖೆ ಈಗ ಹಂತ ಹಂತವಾಗಿ ಬರುತ್ತಿದ್ದಾರೆ. ಬೇರೆ ರಾಜ್ಯಗಳಲ್ಲೂ ಈ ಸಮಸ್ಯೆ ಇದೆ. ಹೀಗಾಗಿ ಈ ವಿಚಾರವಾಗಿ ಸಮಗ್ರವಾಗಿ ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ” ಎಂದರು.
ನಿನ್ನೆ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವವರು ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಡಿನ್ನರ್ ಮೀಟಿಂಗ್ ಮಾಡಿ ಚರ್ಚಿಸಿದ್ದಾರೆ, ಹಿರಿಯ ಶಾಸಕರು ಸಿಎಂ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ ಎಂದು ಕೇಳಿದಾಗ, “ಸಿಎಂ ಭೇಟಿ ವಿಚಾರವಾಗಿ ನನಗೆ ಮಾಹಿತಿ ಇಲ್ಲ. ಅವರುಗಳು ನನ್ನನ್ನು ಭಏಟಿ ಮಾಡಿ ಚರ್ಚೆ ಮಾಡಿಲ್ಲ” ಎಂದರು.
25 ವರ್ಷಗಳು ಪೂರ್ಣಗೊಳ್ಳುವವರೆಗೆ ಹೊಸ ವಿಮಾನ ನಿಲ್ದಾಣ ಹಾಗೂ ಅಭಿವೃದ್ಧಿಕರಣ ಮಾಡುವಂತಿಲ್ಲ ಎಂಬ ವಿಚಾರ ಚರ್ಚೆಯಾಯಿತೇ ಎಂದು ಕೇಳಿದಾಗ, “2033ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 25 ವರ್ಷ ಪೂರ್ಣಗೊಳ್ಳಲಿದೆ. ಅಷ್ಟು ಹೊತ್ತಿಗೆ ನಾವು ಸಕಲ ಸಿದ್ಧತೆ ಮಾಡಿಕೊಳ್ಳಬೇಕು. ಭೂಸ್ವಾಧೀನ ಸೇರಿದಂತೆ ಎಲ್ಲಾ ಕೆಲಸ ಮಾಡಿಕೊಳ್ಳಬೇಕು. ಬಿಎಎಲ್ ಅವರು ಮಾಡಿದರೆ ಈ ನಿರ್ಬಂಧ ಇರುವುದಿಲ್ಲ. ಬೇರೆಯವರಿಗೆ ಕೊಟ್ಟರೆ ಈ ನಿರ್ಬಂಧ ಇರಲಿದೆ” ಎಂದು ತಿಳಿಸಿದರು.
ನೈಸ್ ಸಂಸ್ಥೆ ವಿರುದ್ಧ ಪ್ರತಿಭಟನೆ ಬಗ್ಗೆ ಕೇಳಿದಾಗ, “ಭೂಮಿ ಕಳೆದುಕೊಂಡವರಿಗೆ ನಿವೇಶನ ಹಾಗೂ ಹಣ ನೀಡಬೇಕಲ್ಲವೇ? ರೈತರು ಕೇಳುವುದರಲ್ಲಿ ತಪ್ಪೇನಿದೆ. 25 ವರ್ಷಗಳಿಂದ ಅವರಿಗೆ ಸಿಗದಿದ್ದರೆ, ಅದು ಯಾವ ಸರ್ಕಾರದ ತಪ್ಪೊ, ನೈಸ್ ಸಂಸ್ಥೆಯವರ ತಪ್ಪೋ ಬೇರೆ ವಿಚಾರ. ಆಸ್ತಿ ಕಳೆದುಕೊಂಡವರು ಹೇಗೆ ಸುಮ್ಮನಿರುತ್ತಾರೆ. ಈಗ ಹೊಸ ಕಾನೂನುಗಳು ಬಂದಿವೆ” ಎಂದು ತಿಳಿಸಿದರು.
ಶಾಸಕರಿಂದ ಶಿಸ್ತು ಪಾಲಿಸುವ ಜವಾಬ್ದಾರಿ ಮುಖ್ಯಮಂತ್ರಿಯವರದ್ದು
ಪಕ್ಷದ ಅಧ್ಯಕ್ಷರ ಗಮನಕ್ಕೆ ಬಾರದೇ ಸಭೆ ಮಾಡುತ್ತಿದ್ದಾರಾ ಎಂದು ಕೇಳಿದಾಗ, “ಶಾಸಕರನ್ನು ನಿಯಂತ್ರಣ ಮಾಡುವುದು ಮುಖ್ಯಮಂತ್ರಿಗಳು. ಶಾಸಕಾಂಗದ ಪಕ್ಷದ ನಾಯಕರಾದ ಮುಖ್ಯಮಂತ್ರಿಗಳಿಗೆ ಶಾಸಕರಿಂದ ಶಿಸ್ತು ಪಾಲನೆ ಮಾಡುವ ಜವಾಬ್ದಾರಿ ಹೆಚ್ಚಾಗಿರುತ್ತದೆ” ಎಂದು ತಿಳಿಸಿದರು.
ಎರಡು ಮೂರು ದಿನಗಳಲ್ಲಿ ಉಪಚುನಾವಣೆ ಅಭ್ಯರ್ಥಿಗಳ ಹೆಸರು ಅಂತಿಮ
ದಾವಣಗೆರೆ ಟಿಕೆಟ್ ವಿಚಾರವಾಗಿ ಟಿಕೆಟ್ ಗೊಂದಲದ ಬಗ್ಗೆ ಕೇಳಿದಾಗ, “ಅದರ ಬಗ್ಗೆ ನನಗೆ ಮಾಹಿತಿ ಇಲ್ಲ. ನಾನು ಹಾಗೂ ಸಿಎಂ ಈ ವಿಚಾರವಾಗಿ ಚರ್ಚೆ ಮಾಡಿದ್ದು, ವರದಿ ಇನ್ನು ಬಂದಿಲ್ಲ. ಮುಖ್ಯಮಂತ್ರಿಗಳು ಇಂದು ಮೇಟಿ ಅವರ ಕುಟುಂಬದವರನ್ನು ಕರೆಸಿ ಚರ್ಚೆ ಮಾಡಿದ್ದಾರೆ. ದಾವಣಗೆರೆ ಚುನಾವಣಾ ಆಕಾಂಕ್ಷಿಗಳು ನನ್ನನ್ನು ಭೇಟಿ ಮಾಡುತ್ತಿದ್ದಾರೆ. ನಾನು ನಿನ್ನೆ ಆ ಭಾಗದ ಸಂಸದರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜತೆ ಚರ್ಚೆ ಮಾಡಿದ್ದೇನೆ. ನಾನು ಹೈಕಮಾಂಡ್ ನಾಯಕರಿಗೆ ವರದಿ ನೀಡುತ್ತೇನೆ. ಅಂತಿಮ ತೀರ್ಮಾನ ಹೈಕಮಾಂಡ್ ತೆಗೆದುಕೊಳ್ಳಲಿದೆ” ಎಂದು ತಿಳಿಸಿದರು.
ಅಭ್ಯರ್ಥಿಗಳ ಆಯ್ಕೆ ಯಾವಾಗ ಮುಕ್ತಾಯವಾಗಲಿದೆ ಎಂದು ಕೇಳಿದಾಗ, “ಎರಡು ಮೂರು ದಿನಗಳಲ್ಲಿ ಅಂತಿಮಗೊಳಿಸಲಾಗುವುದು” ಎಂದು ತಿಳಿಸಿದರು.
ಅಸ್ಸಾಂ ಜನರು ಬದಲಾವಣೆ ಬಯಸಿದ್ದಾರೆ
ಅಸ್ಸಾಂ ಕಾಂಗ್ರೆಸ್ ಸಂಸದರು ಬಿಜೆಪಿ ಸೇರ್ಪಡೆ ಬಗ್ಗೆ ಕೇಳಿದಾಗ, “ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕ ಪಕ್ಷ ತೊರೆದಿರುವುದು ನಮಗೆ ಅಚ್ಚರಿ ತಂದಿದೆ. ನಾನು ಅವರ ಜತೆ ಮಾತನಾಡುವ ಪ್ರಯತ್ನ ಮಾಡಿದೆ. ಆದರೆ ಅಷ್ಟು ಹೊತ್ತಿಗೆ ಅವರು ತೀರ್ಮಾನ ಮಾಡಿದ್ದರು. ನಾವು ಇದನ್ನು ನಿರೀಕ್ಷೆ ಮಾಡಿರಲಿಲ್ಲ. ಅವರು ಕಾಂಗ್ರೆಸ್ ಪಕ್ಷದಲ್ಲಿ ರೋಲ್ ಮಾಡೆಲ್ ಆಗಿದ್ದರು” ಎಂದು ತಿಳಿಸಿದರು.
ಕಳೆದ ಒಂದು ತಿಂಗಳ ಅವಧಿಯಲ್ಲಿ ಎರಡನೇ ಬಾರಿಗೆ ಈ ರೀತಿ ನಡೆಯುತ್ತಿದೆ ಎಂದು ಕೇಳಿದಾಗ, “ನಾನು ಈ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡುವುದಿಲ್ಲ. ಹಾಲಿ ಶಾಸಕರು ಹಿರಿಯ ನಾಯಕರು ಪಕ್ಷ ತೊರೆದಿರುವುದು ಪಕ್ಷಕ್ಕೆ ನಷ್ಟ. ಅಸ್ಸಾಂ ನಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿದ್ದು, ಇದು ಎಷ್ಟರ ಮಟ್ಟಿಗೆ ಪರಿಣಾಮ ಬೀರಲಿದೆ ಎಂದು ನನಗೆ ಗೊತ್ತಿದೆ. ಆದರೆ ಅಸ್ಸಾಂ ಜನರು ಬದಲಾವಣೆ ಬಯಸಿದ್ದಾರೆ. ಇಂದು ನಾವು ಇಂದಿರಾ ಭವನದಲ್ಲಿ ಸಭೆ ಮಾಡಲಿದ್ದೇವೆ” ಎಂದು ತಿಳಿಸಿದರು.
Appealed to Union Aviation Minister to review building heights around Bengaluru International Airport: DCM DK Shivakumar
New Delhi, March 18: Deputy Chief Minister DK Shivakumar today said he has appealed to the Union Aviation Minister to review and increase height limits for buildings around Kempe Gowda International Airport, Jakkur aerodrome, Yelahanka Air base and HAL airport.
Speaking to reporters after meeting Union Aviation Minister Ram Mohan Naidu, he said, “We discussed increasing the building height limits in Bengaluru. Hyderabad, Mumbai and other cities have higher limits, we are seeking parity. Builders in Bengaluru are hesitating to purchase Premium FAR in view of this height limitations. The Union Minister told us that he would speak to Defence Minister. Our officials have had discussions with HAL. I will also meet the Defence Minister and discus this issue. This is important for Bengaluru’s development.”
“Minister Bose Raju and Government’s Special Representative in Delhi T B Jayachandra accompanied me for the meeting. These measures are important for easing Bengaluru’s congestion. The height restrictions around airports and airbases is a hindrance for development,” he said.
Govt will respond to an uncooperative NICE appropriately
“After two years of continuous efforts, we have decided to set up sky deck in Kempe Gowda layout. It isn’t possible to erect this within a radius of 20km from any airport. We wanted to build the sky deck near Sompura near NICE Road, but they refused to issue NOC. They did not cooperate with the government and we will deal with them,” he said.
“The Union Minister said he was studying guidelines from around the world and various cities of India and would hold a meeting next week. Bengaluru Business Corridor is coming up in Bengaluru and these height restrictions may become a hindrance for the project,” he added.
Govt to take a call on second airport
“The Centre has shared its feedback on the second airport. It has asked us to finalize the location for the second airport. We have a few options for the location and we will take a decision after weighing the pros and cons. I discussed the second airport issue in the interest of Bengaluru city. Industries Minister M B Patil is responsible for the airport project,” he explained.
Q&A
Asked why the Defence Ministry isn’t cooperating though this demand has been there for years, he said, “The Defence Ministry is addressing this in a phased manner. Other states have the same issue. Hence, they will be taking a comprehensive and integrated decision for the entire country.”
When asked about a dinner meeting of first-time MLAs to discuss a place in the Cabinet and senior MLAs meeting the CM, he said, “I don’t know about them meeting the CM. They haven’t discussed anything with me.”
When asked if the 25-year non-compete clause of the Bengaluru International Airport Limited for the second airport was discussed, he said, “The non-compete clause ends in 2033, we have to prepare ourselves before that. There won’t be any restriction of the BIAL does the second airport also.”
Asked about protests against NICE Road, he said, “The farmers who lost the land must be compensated, there is nothing wrong in their claim. How will they wait for 25 years for the compensation.”
Asked if the legislators are having meetings without the knowledge of the Party President, the DCM said, “The responsibility to manage legislators rests with the CM as he is the Legislative Party Leader.”
Candidates for by-election to be finalized in 2-3 days
Asked about confusion around Congress ticket for Davanagere by-election, he said, “I don’t have information on that. I have discussed it with the CM. The CM held a discussion with Meti family today. Aspirants from Davanagere are meeting us. We will give the report to the High command and they will take a decision. Candidatures will be finalized in 2-3 days.”
Assam people want change
Asked about Assam Congress MPs joining BJP, he said, “I am surprised that the sincere leaders leaving the Congress party. I tried speaking to them but they had made up their mind by then. It is a loss for the party. The people of Assam want change. We are holding a meeting at Indira Bhawan today.”

