ಪ್ರಗತಿವಾಹಿನಿ ಸುದ್ದಿ; ಉಡುಪಿ: ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳುವ ಮೂಲಕ ಯೂತ್ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ ಮತ್ತೆ ಸಿಎಂ ಅಭ್ಯರ್ಥಿ ಚರ್ಚೆ ಹುಟ್ಟುಹಾಕಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಮುಂದಿನ ಎರಡು ವರ್ಷದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಎಲ್ಲರೂ ಕಾಂಗ್ರೆಸ್ ಗೆ ಮತ ಹಾಕಬೇಕು. ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಜನರ ಕಷ್ಟಗಳಿಗೆ ಸ್ಪಂದಿಸಿದ್ದು ಕಾಂಗ್ರೆಸ್. ಹಾಗಾಗಿ ಎಲ್ಲರೂ ಕಾಂಗ್ರೆಸ್ ಗೆ ಮತ ಹಾಕಬೇಕು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಡಿ.ಕೆ.ಶಿವಕುಮಾರ್ ಅವರೇ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ನಲ್ಲಿ ಸಿಎಂ ಅಭ್ಯರ್ಥಿ ಬಗ್ಗೆ ಮಾತನಾಡದಂತೆ ಹೈಕಮಾಂಡ್ ತಾಕೀತು ಮಾಡಿದ ಬೆನ್ನಲ್ಲೇ ಸ್ವಲ್ಪ ತಣ್ಣಗಾಗಿದ್ದ ಸಿಎಂ ಅಭ್ಯರ್ಥಿ ವಿಚಾರ ಈಗ ಮತ್ತೆ ಚರ್ಚೆಗೆ ಕಾರಣವಾಗಿದೆ.
ರಾಜ್ಯದ 3 ಸಂಸದರಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ