*ಪ್ರಮಾಣವಚನಕ್ಕೆ ತೆರಳುವ ಮೊದಲು ತಾಯಿ ಗೌರಮ್ಮ ಆಶಿರ್ವಾದ ಪಡೆದ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ನಿಯೋಜಿತ ಸಿಎಂ ಡಿ.ಕೆ ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ತಾಯಿ ಗೌರಮ್ಮ ಅವರ ಆಶಿರ್ವಾದ ಪಡೆದರು.Home add -Advt ಮಗ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರಿನ ಸದಾಶಿವನಗರದ ನಿವಾಸಕ್ಕೆ ಡಿ.ಕೆ.ಶಿವಕುಮಾರ್ ತಾಯಿ ಗೌರಮ್ಮ ಆಗಮಿಸಿದ್ದಾರೆ. ಪ್ರಮಾಣವಚನ ಸ್ವೀಕಾರಕ್ಕೆ ಲೋಕಭವನಕ್ಕೆ ತೆರಳುವ ಮೊದಲು ಡಿ.ಕೆ.ಶಿವಕುಮಾರ್ ಸದಾಶಿವನಗರ ನಿವಾಸದಲ್ಲಿ ಮಾತೃಶ್ರೀ ಗೌರಮ್ಮನವರ ಆಶೀರ್ವಾದ ಪಡೆದರು. *ಡಿ.ಕೆ ಶಿವಕುಮಾರ್ ಅವರಿಗೆ ಶುಭ ಕೋರಿದ ಸೋನಿಯಾ ಗಾಂಧಿ*