*ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ಬಿಜೆಪಿ ಸಂಸದ ಸಿದ್ದೇಶ್ವರ್; ಕುತೂಹಲ ಮೂಡಿಸಿದ ಮಾತುಕತೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಬೆನ್ನಲ್ಲೇ ಸಾಲು ಸಾಲು ಬಿಜೆಪಿ, ಜೆಡಿಎಸ್ ನಾಯಕರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಮಧ್ಯೆ ಬಿಜೆಪಿ ಸಂಸದ ಜಿ.ಎಂ.ಸಿದ್ದೇಶ್ವರ್ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ದಾವಣಗೆರೆ ಬಿಜೆಪಿ ಸಂಸದ ಜಿ.ಎಂ. ಸಿದ್ದೇಶ್ವರ್ ಇಂದು ಬೆಂಗಳೂರಿನಲ್ಲಿ ಡಿ.ಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಕೂದ ಇದ್ದರು.
ಆದರೆ ಸಂಸದ ಸಿದ್ದೇಶ್ವರ್, ಡಿಸಿಎಂ ಭೇಟಿಗೆ ರಾಜಕೀಯ ಕಾರಣಗಳಿಲ್ಲ ಎನ್ನಲಾಗಿದೆ. ಮಳೆ ಕೊರತೆಯಿಂದಾಗಿ ಜಿಲ್ಲೆಯ ರೈತರು ತೀವ್ರ ಸಂಕಷ್ಟಕ್ಕೀಡಾಗಿದ್ದು, ಈ ಹಿನ್ನೆಲೆಯಲ್ಲಿ ಭದ್ರಾ ಕಾಲುವೆಗೆ ನೀರು ಹರಿಸುವಂತೆ ಮನವಿ ಮಾಡುವ ನಿಟ್ಟಿನಲ್ಲಿ ಭೇಟಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ