
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ.ಶಿವಕುಮಾರ್, ವಿಧಾನಸೌಧ ಮೆಟ್ಟುಲುಗಳಿಗೆ ತಲೆಬಾಗಿ ನಮಸ್ಕರಿಸಿ ವಿಧಾನಸೌಧ ಪ್ರವೇಶಿಸಿದ್ದಾರೆ.
ಬೆಂಗಳೂರಿನ ಕಂಠೀರವ ಕ್ರೀಡಾಂಗಾದಲ್ಲಿ ನಡೆದ ಐತಿಹಾಸಿಕ ಪದಗ್ರಹಣ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿಯಾಗಿ ಪ್ರಮಾನವಚನ ಸ್ವೀಕಾರ ಮಾಡಿದ ಡಿ.ಕೆ.ಶಿವಕುಮಾರ್, ವಿಧಾನಸೌಧದಲ್ಲಿ ನೂತನ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಭಾಗಿಯಾದರು.
ಈ ವೇಳೆ ವಿಧಾನಸೌಧ ಪ್ರವೇಶಿಸುವ ಮುನ್ನ ಮೆಟ್ಟಿಲುಗಳಿಗೆ ದೀರ್ಗದಂಡ ನಮಸ್ಕಾರ ಮಾಡಿ ಪ್ರವೇಶಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ