Latest

ಇನ್ನೂ ಎರಡು ದಿನ ಭಾರಿ ಮಳೆ; 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಳೆದ ಕೆಲ ದಿನಗಳಿಂದ ರಾಜ್ಯಾದ್ಯಂತ ಮಳೆ ಅಬ್ಬರ ಜೋರಾಗಿದ್ದು, ರಾಜಧಾನಿ ಬೆಂಗಳೂರಿನ ಜನರು ವರುಣಾರ್ಭಟಕ್ಕೆ ಸಂಕಷ್ಟಕ್ಕೀಡಾಗಿದ್ದಾರೆ.

ಬಂಗಳಕೊಲಿಯಲ್ಲಿ ಮೇಲ್ಮೈ ಸುಳಿಗಾಳಿಯಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Home add -Advt

ಉತ್ತರ ಒಳನಾಡಿನಲ್ಲಿ ಇಂದಿನಿಂದ ಅ.19ರವರೆಗೆ ಮಳೆಯಾಗಲಿದೆ. ಬೆಳಗಾವಿ, ದಾವಣಗೆರೆ, ಚಿತ್ರದುರ್ಗ, ಮಂಡ್ಯ, ಮೈಸೂರು, ಚಾಮರಾಜನಗರ ಈ 6 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಹಾವೇರಿ, ಕಲಬುರ್ಗಿ, ಕೊಪ್ಪಳ, ಗದಗ, ರಾಯಚೂರು, ಬೀದರ್, ಜಿಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಗ್ರಾಮಾಂತರ , ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗಲಿದ್ದು ಎರಡು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಚಿಕ್ಕೋಡಿಯಲ್ಲಿ ಸೋಮವಾರ ಬಿಜೆಪಿ ಸಂಕಲ್ಪ ಸಮಾವೇಶ

https://pragati.taskdun.com/belgaum-news/bjp-sankalpa-samavesha-in-chikkodi-on-monday/

Related Articles

Back to top button