
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಶೀಘ್ರದಲ್ಲಿಯೇ ಆಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮೇ 26ರಂದು ಹಳೆ ಸರ್ಕಾರದ ಅವಧಿ ಮುಗಿಯಲಿದೆ. ಅಷ್ಟರೊಳಗೆ ನೂತನ ಸಚಿವ ಸಂಪುಟ ರಚನೆಯಾಗಲಿದೆ ಎಂದು ಹೇಳಿದರು.
ಇನ್ನು ಎರಡ್ಮೂರು ದಿನಗಳಲ್ಲಿ ನೂತನ ಸಚಿವರ ಪ್ರಮಾಣಚನ ಸ್ವೀಕಾರ ನಡೆಯಲಿದೆ. ಮೇ 24ರೊಳಗೆ ಹೊಸ ಸದಸ್ಯರು ಸಂಪುಟ ಸೇರಲಿದ್ದಾರೆ ಎಂದರು.
ಇನ್ನು ಖಾತೆ ಹಂಚಿಕೆ ವಿಚಾರವಾಗಿ ಮಾತನಾಡಿದ ಅವರು, ಖಾತೆ ಹಂಚಿಕೆ ಸಿಎಂ ಹಾಗೂ ಹೈಕಮಾಂಡ್ ಗೆ ಬಿಟ್ಟ ವಿಚಾರ. ಅವರೇ ತೀರ್ಮಾನ ಮಾಡ್ತಾರೆ ಎಂದು ಹೇಳಿದರು.
 
					 
				 
					 
					 
					 
					
 
					 
					 
					


