Karnataka NewsPolitics

*ಹೊಸ ವರ್ಷಾಚರಣೆ: ದುರ್ವರ್ತನೆ ತೋರಿದರೆ ಕಠಿಣ ಕ್ರಮ: ಡಿಸಿಎಂ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: “ಹೊಸ ವರ್ಷಾಚರಣೆ ವೇಳೆ ಯಾರೊಬ್ಬರೂ ದುರ್ವರ್ತನೆ ಮಾಡುವಂತಿಲ್ಲ. ಕಾನೂನು ಉಲ್ಲಂಘನೆ ಮಾಡುವಂತಿಲ್ಲ. ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕಟ್ಟಿಟ್ಟ ಬುತ್ತಿ. ಇದನ್ನು ಮನವಿಯಾಗಿಯಾದರೂ ಪರಿಗಣಿಸಿ, ಇಲ್ಲವೇ ಎಚ್ಚರಿಕೆ ಎಂದಾದರೂ ಪರಿಗಣಿಸಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಮಾಧ್ಯಮಗಳಿಗೆ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು.

“ಬೆಂಗಳೂರಿನಾದ್ಯಂತ 10 ಸಾವಿರಕ್ಕೂ ಹೆಚ್ಚು ಕ್ಯಾಮೆರಾ ಅಳವಡಿಸಲಾಗಿದ್ದು, ಎಲ್ಲರ ಚಲನವಲನಗಳ ಮೇಲೆ ಕಣ್ಣಿಡಲಾಗುವುದು. ಹೊಸವರ್ಷಾಚರಣೆ ವೇಳೆ ರಾಜ್ಯದ ಗೌರವ ಹಾಗೂ ಗಾಂಭೀರ್ಯ ಕಾಪಾಡಬೇಕು”ಎಂದು ತಿಳಿಸಿದರು.

“ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 7 ದಿನ ಶೋಕಾಚಾರಣೆ ಘೋಷಣೆ ಮಾಡಿದ್ದು, ಕೇವಲ ಸರ್ಕಾರಿ ಕಾರ್ಯಕ್ರಮಗಳನ್ನು ಮಾತ್ರ ತಡೆ ಹಿಡಿಯಲಾಗಿದೆ. ಅದರ ಹೊರತಾಗಿ ಖಾಸಗಿ ಕಾರ್ಯಕ್ರಮಗಳಲ್ಲಿ ನಾವು ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಹೀಗಾಗಿ ಖಾಸಗಿಯಾಗಿ ಹೊಸ ವರ್ಷಾಚರಣೆ ಮಾಡುವವರು ಮಾಡಿಕೊಳ್ಳಬಹುದು” ಎಂದರು.

“ಹೊಸವರ್ಷಾಚರಣೆ ಮಾರ್ಗಸೂಚಿ, ಸಮಯಾವಕಾಶದ ಬಗ್ಗೆ ಪೊಲೀಸರು ಮಾಹಿತಿ ನೀಡಲಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇರಬೇಕು. ಪಾಲಿಕೆ ಹಾಗೂ ಪೊಲೀಸರು ವ್ಯಾಪಾರಸ್ಥರಿಗೆ ಮಾರ್ಗಸೂಚಿ ನೀಡಲಿದ್ದಾರೆ. ಕಾಲಾವಕಾಶ ವಿಸ್ತರಣೆ ಮಾಡಿದ್ದರೂ ಯಾರೊಬ್ಬರೂ ಕಾನೂನು ಉಲ್ಲಂಘನೆ ಮಾಡುವಂತಿಲ್ಲ” ಎಂದು ತಿಳಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button