Karnataka NewsLatestPolitics

*ಸರಳವಾಗಿ ಪ್ರಮಾಣವಚನ ಸ್ವೀಕರಿಸಲು ಡಿ.ಕೆ.ಶಿವಕುಮಾರ್ ನಿರ್ಧಾರ: ಅಭಿಮಾನಿಗಳು ಬೆಂಗಳೂರಿಗೆ ಬರದಂತೆ ಮನವಿ*

ಪ್ರಗತಿವಾಹಿನಿ ಸುದ್ದಿ: ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಮುಹೂರ್ತ ಫಿಕ್ಸ್ ಆಗಿದೆ. ಜೂನ್ 3ರಂದು ಲೋಕಭವನದಲ್ಲಿ ಡಿ.ಕೆ.ಶಿವಕುಮಾರ್ ಪದಗ್ರಹಣ ಮಾಡಲಿದ್ದಾರೆ.

Home add -Advt

ಈ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಜೆ.ಸಿ.ಚಂದ್ರಶೇಖರ್ ಮಾಹಿತಿ ನೀಡಿದ್ದು, ಯಾವುದೇ ಆಡಂಬರವಿಲ್ಲ, ಅತ್ಯಂತ ಸರಳವಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲು ನಿರ್ಧರಿಸಿದ್ದಾರೆ. ಲೋಕಭವನದ ಗಾಜಿನ ಮನೆಯಲ್ಲಿ ಜೂನ್ ೩ರಂದು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದರು.

ಬೇರೆ ಬೇರೆ ಊರುಗಳಿಂದ ಬೆಂಗಳೂರಿಗೆ ಅಭಿಮಾನಿಗಳು ಬರುವುದು ಬೇಡ. ಕಾರಣ ಪೆಟ್ರೋಲ್, ಡೀಸೆಲ್ ಸೇರಿದಂತೆ ಇಂಧನ ದರ ಏರಿಕೆಯಾಗಿರುವುದರಿಂದ ಅನಗತ್ಯವಾಗಿ ಖರ್ಚು ಮಾಡಿಕೊಂಡು ಬೆಂಗಳೂರಿಗೆ ಬರದಂತೆ ಮನವಿ ಮಾಡಿದ್ದಾರೆ. ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸಮಾರಂಭವಿರುವುದರಿದ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧವಿರುತ್ತದೆ. ಅತ್ಯಂತ ಸರಳವಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ ಎಂದರು.

ದಿನದಿಂದ ದಿನಕ್ಕೆ ತೈಲ ಬೆಲೆ, ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಜನರು ತೊಂದರೆಯಲ್ಲಿದ್ದಾರೆ. ಹೀಗಾಗಿ ಯಾವುದೇ ಅದ್ಧೂರುತನವಿಲ್ಲದೇ ಸಾಧ್ಯವಾದಷ್ಟು ಸರಳ ರೀತಿಯಲ್ಲಿ ಪದಗ್ರಹಣ ಮಾಡಲು ಡಿ.ಕೆಶಿ ನಿರ್ಧರಿಸಿದ್ದಾಗಿ ತಿಳಿಸಿದರು.

Related Articles

Back to top button