Karnataka NewsLatestPolitics

*ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ*

ಪ್ರಗತಿವಾಹಿನಿ ಸುದ್ದಿ: ಸಿದ್ದರಾಮಯ್ಯ ರಾಜೀನಾಮೆ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಡಿ.ಕೆ.ಶಿವಕುಮಾರ್ ಅವರಿಗೆ ಪ್ರಮಾಣಚನ ಬೋಧಿಸಿದರು. ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ವೀರ ಗಂಗಾಧರಜ್ಜನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಈ ಮೂಲಕ ಕರ್ನಾಟಕದಲ್ಲಿ ಇಂದಿನಿಂದ ಡಿ.ಕೆ.ಶಿವಕುಮಾರ್ ಹೊಸ ಯುವ ಆರಂಭವಾಗಿದೆ.

Home add -Advt

ಡಿ.ಕೆ.ಶಿವಕುಮಾರ್ ಅವರ ಜೊತೆ 13 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಮುಖ್ಯವಾಗಿ ಡಾ. ಜಿ.ಪರಮೇಶ್ವರ್ ಅವರು ಏಕೈಕ ಉಪಮುಖ್ಯಮಂತ್ರಿಯಾಗಿ ಪ್ರದಗ್ರಹ ಮಾಡಿದ್ದಾರೆ.

ಸತೀಶ್​​ ಜಾರಕಿಹೊಳಿ, ಕೆ.ಹೆಚ್.ಮುನಿಯಪ್ಪ, ಪ್ರಿಯಾಂಕ್​​ ಖರ್ಗೆ, ಕೃಷ್ಣ ಭೈರೇಗೌಡ, ಯು.ಟಿ.ಖಾದರ್​, ಡಾ.ಯತೀಂದ್ರ ಸಿದ್ದರಾಮಯ್ಯ, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ರಾಮಲಿಂಗಾರೆಡ್ಡಿ, ಈಶ್ವರ್ ಖಂಡ್ರೆ, ಭೈರತಿ ಸುರೇಶ್​, ಶರಣಪ್ರಕಾಶ್ ಪಾಟೀಲ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ವಿವಿಧ ಮಠಾಧೀಶರು, ಜೈನ ಮುನಿಗಳು, ಮೌಲ್ವಿಗಳು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ, ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related Articles

Back to top button