Karnataka NewsLatestPolitics
*ಜೂನ್ 3ರಂದು ಸಿಎಂ ಆಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸಾಧ್ಯತೆ*

ಪ್ರಗತಿವಾಹಿನಿ ಸುದ್ದಿ: ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ನಲ್ಲಿ ಸರ್ಕಾರ ರಚನೆ ಕಸರತ್ತು ಆರಂಭವಾಗಿದೆ. ಡಿ.ಕೆ.ಶಿವಕುಮಾರ್ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗುವುದು ಖಚಿತವಾಗಿದೆ.
ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಸಭೆಯಲ್ಲಿ ನೂತನ ಸಿಎಂ ಹೆಸರು ಅಧಿಕೃತವಾಗಿ ಘೋಷಣೆಯಾಗಲಿದೆ. ಈಗಾಗಲೇ ಡಿ.ಕೆ.ಶಿವಕುಮಾರ್ ಪ್ರಮಾಣವಚನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಜೂನ್ 3 ರಂದು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ. ಈ ಸಂಬಂಧ ಈಗಾಗಲೇ ರಾಜ್ಯಪಾಲರ ಕಚೇರಿಗೆ ಮಾಹಿತಿ ರವಾನಿಸಲಾಗಿದೆ.
ಡಿ.ಕೆ.ಶಿವಕುಮಾರ್ ಅವರೊಂದಿಗೆ ಸುಮಾರು 12 ರಿಂದ 14 ಶಾಸಕರು ಕೂಡ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.




