Latest

*ಮಂಚದ ಮೇಲಿದ್ದ ಮಂತ್ರಿ ಭ್ರಷ್ಟ ಎಂದಿದ್ದು ಯಾರನ್ನ?; ಸಾಲು ಸಾಲು ಸವಾಲೆಸೆದ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ಮಾಡಿ, ಅರ್ಕಾವತಿ ರೀಡೂ ಅಂತಾ 8ಸಾವಿರ ಕೋಟಿ ಮೋಸ ಎಂದು ಆರೋಪಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಕೆಂಡ ಕಾರಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಾಲು ಸಾಲು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳು ನಾವುಗಳು ಇಲ್ಲದ ಸಮಯದಲ್ಲಿ ನಿನ್ನೆ ವಿಧಾನಮಂಡಲ ಅಧಿವೇಶನದಲ್ಲಿ ಅರ್ಕಾವತಿ ರಿಡೂ ವಿಚಾರವಾಗಿ ಮಾತನಾಡಿ ಪತ್ರಿಕೆಗಳಲ್ಲಿ ಹೆಡ್ ಲೈನ್ ಬರುವಂತೆ ಮಾಡಿದ್ದಾರೆ. ಅವರು ವಿರೋಧ ಪಕ್ಷದಲ್ಲಿ ಕೂತಿದ್ದಾಗ ಕಡಲೇಪುರಿ ತಿನ್ನುತ್ತಿದ್ದರಾ? ಇನ್ನು ಕಳೆದ ನಾಲ್ಕು ವರ್ಷಗಳಿಂದ ಆಡಳಿತ ಮಾಡಿದರಲ್ಲಾ ಆಗ್ಯಾಕೆ ಅವರು ಸುಮ್ಮನಿದ್ದರು. ಅವರು ಈ ವರದಿಯನ್ನು ಸದನದಲ್ಲಿ ಮಂಡಿಸಿ ಚರ್ಚೆ ಮಾಡಲಿಲ್ಲ ಯಾಕೆ? ಎಂದು ಪ್ರಶ್ನಿಸಿದರು.

ಈಗಲೂ ನಾನು ಅವರಿಗೆ ಸವಾಲು ಹಾಕುತ್ತೇನೆ. ಒಂದು ದಿನ ಅಧಿವೇಶನ ವಿಸ್ತರಣೆ ಮಾಡಲಿ, ಈ ವಿಚಾರವಾಗಿ ಚರ್ಚೆಗೆ ಅವಕಾಶ ನೀಡಲಿ. ನಾವು ಎಐಸಿಸಿ ಅಧಿವೇಶನಕ್ಕೆ ಹೋಗದಿದ್ದರೂ ಪರ್ವಾಗಿಲ್ಲ,  ಈ ವಿಚಾರವಾಗಿ ಚರ್ಚೆ ಮಾಡಲು ಸಿದ್ಧವಿದ್ದೇವೆ ಎಂದರು.

ಸಿಎಂ ಬೊಮ್ಮಾಯಿ ಅವರು ಜನರ ಕಿವಿ ಮೇಲೆ ಹೂವ ಇಡಲು ಬಜೆಟ್ ನಲ್ಲಿ ಕೆಲ ಘೋಷಣೆ ಮಾಡಿದ್ದಾರಾ? ಬಿಜೆಪಿ ಸರ್ಕಾರ ಈವರೆಗೆ ನುಡಿದಂತೆ ನಡೆಯಲಿಲ್ಲ. ಕಳೆದ ಮೂರು ವರ್ಷಗಳ ಬಜೆಟ್ ಅನ್ನು ಅವರು ಹೇಗೆ ಜಾರಿ ಮಾಡಿದ್ದಾರೆ. ಒಂದು ಸರ್ಕಾರವಾಗಿ ದೇವಸ್ಥಾನ ಕಟ್ಟುತ್ತೇವೆ ಎಂದರೆ ಹೇಗೆ. ದೇವಸ್ಥಾನ ಕಟ್ಟಲು, ಧರ್ಮ ಉಳಿಸಲು ಸಂಘ ಸಂಸ್ಥೆಗಳಿವೆ. ಅಯೋಧ್ಯೆಯಲ್ಲಿ ರಾಮನ ದೇವಾಲಯವನ್ನು ಸರ್ಕಾರ ನಿರ್ಮಾಣ ಮಾಡುತ್ತಿದೆಯೇ? ಇವರು ಭಾವನೆ ಮೂಲಕ ಆಡಳಿತ ಮಾಡುತ್ತಾರ? ನಮ್ಮ ಸರ್ಕಾರ ಬದುಕಿನ ಆಧಾರದ ಮೇಲೆ ಆಡಳಿತ ಮಾಡುತ್ತದೆ. ಈ ವಿಚಾರದಲ್ಲಿ ನಾನು ಆಯನೂರು ಮಂಜುನಾಥ್ ಅವರನ್ನು ಪ್ರಶಂಶಿಸುತ್ತೇನೆ. ಅವರು ಸತ್ಯಾಂಶ ಒಪ್ಪಿಕೊಂಡಿದ್ದಾರೆ. ಅಮಿತ್ ಶಾ ಅವರು ಭ್ರಷ್ಟಾಚಾರ ವಿರುದ್ಧ ಹೋರಾಟ ಮಾಡುವುದಾಗಿ ಹೇಳಿದ್ದಾರೆ. ಅವರು ಮತ್ತೆ ಅಧಿಕಾರಕ್ಕೆ ಬರುವುದಿಲ್ಲ. ಆದರೆ ಈ ಮಾತನ್ನು ಹೇಳುವ ಮೂಲಕ ರಾಜ್ಯದಲ್ಲಿ ಭ್ರಷ್ಟಾಚಾರ ಇದೆ ಎಂಬ ನಮ್ಮ ಆರೋಪಕ್ಕೆ ಅವರು ಅಂಕಿತ ಹಾಕಿದ್ದಾರೆ. ಇದಕ್ಕಾಗಿ ನಾವು ಅವರಿಗೆ ಅಭಿನಂದನೆ ಸಲ್ಲಿಸುತ್ತೇವೆ’ ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ನಡುವೆ ಜಗಳವಾಗುತ್ತಿದೆ, ಕಾಂಗ್ರೆಸ್ ಗೆ ಮತ ಹಾಕಿದರೆ ಹೈಕಮಾಂಡ್ ಗೆ ಎಟಿಎಂ ಕೊಟ್ಟಂತೆ ಎಂಬ ಅಮಿತ್ ಶಾ ಅವರ ಹೇಳಿಕೆ ವಿಚಾರವಾಗಿ, ‘ನಾನು ಸಿದ್ದರಾಮಯ್ಯ ಕೈಕೈ ಮಿಲಾಯಿಸಿ ಜಗಳವಾಡಲು ಕುಸ್ತಿ ಅಖಾಡದಲ್ಲಿ ಇದ್ದೇವಾ? ಜಗಳ, ಕುಸ್ತಿಗಳು ಏನಿದ್ದರೂ ಬಿಜೆಪಿಯಲ್ಲಿದೆ. ಯುದ್ಧ, ಹೇಳಿಕೆ ಸಮರ ನಡೆಯುತ್ತಿರುವುದು ಬಿಜೆಪಿ ಪಕ್ಷದಲ್ಲಿ. ಅವರು ಯಡಿಯೂರಪ್ಪನವರ ಕಣ್ಣಲ್ಲಿ ನೀರು ಹಾಕಿಸಿದ್ದು ಯಾಕೆ? ನಿರಾಣಿ ವಿಚಾರವಾಗಿ ಯತ್ನಾಳ್ ಏನು ಹೇಳಿದರು? ಸರ್ಕಾರದ ಬಗ್ಗೆ ವಿಶ್ವನಾಥ್, ಗೂಳಿಹಟ್ಟಿ ಶೇಖರ್ ಏನು ಹೇಳಿದ್ದಾರೆ? ವಿಧಾನಸೌಧ ಕಾರಿಡಾರ್ ನಲ್ಲಿ ಬಿಜೆಪಿ ಶಾಸಕರು ಏನು ಮಾತನಾಡುತ್ತಿದ್ದಾರೆ? ಯೋಗೇಶ್ವರ್ ಏನು ಹೇಳಿದ್ದಾರೆ? ಮಂಚದ ಮೇಲಿದ್ದ ಮಂತ್ರಿ ಯಾರು ಭ್ರಷ್ಟ ಎಂದು ಹೇಳಿದ? ಎಂಟಿಬಿ ನಾಗರಾಜ್ ಅವರು ಏನು ಹೇಳಿದರು? ಮಾಧ್ಯಮಗಳಲ್ಲಿ ಯಾರ ಸರ್ಕಾರದ ರೇಟ್ ಕಾರ್ಡ್ ಪ್ರಕಟವಾಯಿತು? ಇದು ಸುಳ್ಳಾಗಿದ್ದರೆ ಅದನ್ನು ಸಾಬೀತು ಮಾಡಿ ಅವರ ವಿರುದ್ಧ ಕೇಸ್ ಯಾಕೆ ಹಾಕಿಲ್ಲ? ಇವರಿಗೆ ಭ್ರಷ್ಟಾಚಾರದ ಬಗ್ಗೆ ಚರ್ಚೆ ಮಾಡುವ ಆಸಕ್ತಿ ಇದ್ದರೆ ಅಧಿವೇಶನ ವಿಸ್ತರಣೆ ಮಾಡಿ, ಚರ್ಚೆಗೆ ಅವಕಾಶ ನೀಡಲಿ’ ಎಂದು ತಿರುಗೇಟು ನೀಡಿದರು.

*ಕಾಂಗ್ರೆಸ್ ನಿಂದ ಮತ್ತೊಂದು ಮಹತ್ವದ ಘೋಷಣೆ*

https://pragati.taskdun.com/d-k-shivakumarcongress10kg-free-raice-pressmeetsiddaramaiah/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button