Latest

*ವಂದೇ ಭಾರತ್ ರೈಲಿನ ಮೇಲೆ ಕಲ್ಲುತೂರಾಟ; ಗಾಜುಗಳು ಪುಡಿಪುಡಿ, ಪ್ರಯಾಣಿಕರಿಗೆ ಗಾಯ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದ ವಂದೇ ಭಾರತ ಎಕ್ಸ್ ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮೈಸೂರು-ಚೆನ್ನೈ ವಂದೇ ಭಾರತ ಎಕ್ಸ್ ಪ್ರೆಸ್ ರೈಲಿನ ಮೇಲೆ ಕೆ ಆರ್ ಪುರಂ-ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣದ ಬಳಿ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದಾರೆ. ಘಟನೆಯಲ್ಲಿ ರೈಲಿನ ಎರಡು ಗಾಜುಗಳಿಗೆ ಹಾನಿಯಾಗಿದ್ದು, ಪ್ರಯಾಣಿಕರು ಗಾಯಗೊಂಡಿದ್ದಾರೆ.

Home add -Advt

ರೈಲ್ವೆ ಇಲಾಖೆ ವಸ್ತುಗಳಿಗೆ ಹಾನಿಯುಂಟು ಮಾಡಿದರೆ ಅಂತವರ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸಲಾಗುವುದು ಎಂದು ಬೆಂಗಳೂರು ರೈಲ್ವೆ ವಿಭಾಗ ಎಚ್ಚರಿಕೆ ನೀಡಿದೆ. ಇದರ ಬೆನ್ನಲ್ಲೇ ಕಿಡಿಗೇಡಿಗಳ ಪತ್ತೆಗಾಗಿ ರೈಲ್ವೆ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಬೆಳಗಾವಿ ನಗರದಲ್ಲಿ ಸಂಚಾರ ಮಾರ್ಗ ಬದಲಾವಣಿ

Related Articles

Back to top button