Kannada NewsKarnataka NewsLatestPolitics

*ನಾಳೆ ಸಂಜೆ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ: ಅತಿಥಿಗಳಿಗೆ ಮೂರು ರೀತಿಯ ಪಾಸ್ ವಿತರಣೆ*

ಪ್ರಗತಿವಾಹಿನಿ ಸುದ್ದಿ: ನಾಳೆ ಡಿ.ಕೆ.ಶಿವಕುಮಾರ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಲೋಕಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಲಿದ್ದು, ಪ್ರಮುಖ ಅತಿಥಿಗಳಿಗೆ ಮೂರು ರೀತಿಯ ಪಾಸ್ ವಿತರಣೆ ಮಾಡಲಾಗುತ್ತಿದೆ.

ಲೋಕಭವನದ ಗಾಜಿನಮನೆಯಲ್ಲಿ ನಾಳೆ ಸಂಜೆ 4.05ಕ್ಕೆ ಪ್ರಮಾಣವಚನ ಸಮಾರಂಭ ನಡೆಯಲಿದೆ. ಕಾರ್ಯಕ್ರಮಕ್ಕೆ ಅಂತಿಮ ಹಂತದ ಸಿದ್ಧತೆಗಳು ನಡೆಯುತ್ತಿವೆ. ನಾಳೆಯ ಪದಗ್ರಹಣ ಕಾರ್ಯಕ್ರಮದಲ್ಲಿ ಸ್ವಾಮೀಜಿಗಳು, ಸಿನಿಮಾ ತಾರೆಯರು, ಶಾಸಕರು, ಮಾಜಿ ಸಚಿವರು ಸೇರಿ ಗಣ್ಯರು ಭಾಗಿಯಾಗಲಿದ್ದು, ಕಾರ್ಯಕ್ರಮಕ್ಕೆ ಬರುವರಿಗೆ ಮೂರು ರೀತಿ ಪಾಸ್ ನೀಡಲು ಸಿದ್ಧತೆ ನಡೆದಿದೆ.

Home add -Advt

ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಪ್ರಮುಖ ನಾಯಕರ ಕುಟುಂಬಗಳು, ಬೆಂಬಲಿಗರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಇರಲಿದೆ. ಅತಿ ಗಣ್ಯರು, ಗಣ್ಯರು ಹಾಗೂ ಸಾಮಾನ್ಯರಿಗೆ ಪ್ರತ್ಯೇಕ ಪಾಸ್ ವ್ಯವಸ್ಥೆ ಇರಲಿದ್ದು, ಮಧ್ಯಾಹ್ನ 2 ಗಂಟೆ ಒಳಗಾಗಿ ಲೋಕಭವನಕ್ಕೆ ಬರುವಂತೆ ಸೂಚನೆ ನೀಡಲಾಗಿದೆ.

Related Articles

Back to top button