*ಜತೆಗೂಡುವುದು ಆರಂಭ, ಜತೆಗೂಡಿ ಆಲೋಚಿಸುವುದು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಯಶಸ್ಸು; ವಿಪಕ್ಷ ನಾಯಕರ ಮಹಾ ಮೈತ್ರಿಕೂಟದ ಸಭೆ ಬಗ್ಗೆ ಡಿಸಿಎಂ ಹೇಳಿಕೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದೇಶದ ಹಿತಾಸಕ್ತಿ ಕಾಯಲು ವಿರೋಧ ಪಕ್ಷಗಳು ಒಂದುಗೂಡುತ್ತಿರುವುದು ಉತ್ತಮ ಆರಂಭ. ಜತೆಗೂಡುವುದು ಆರಂಭ, ಜತೆಗೂಡಿ ಆಲೋಚಿಸುವುದು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಯಶಸ್ಸು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನ ತಾಜ್ ವೆಸ್ಟ್ಎಂಡ್ ಹೋಟೆಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ದೇಶದ ಭವಿಷ್ಯವನ್ನು ಹೇಗೆ ರೂಪಿಸಬೇಕು ಎಂಬುದರ ಬಗ್ಗೆ ನಾಳೆ ದೊಡ್ಡ ಮಟ್ಟದ ಸಭೆ ನಡೆಯಲಿದೆ. ಇದು ಕೇವಲ ಒಂದು ಪಕ್ಷದ ಸಭೆಯಲ್ಲ. ದೇಶದ 140 ಕೋಟಿ ಜನರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಪರಿಹಾರ ನೀಡಲು ಈ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದರು.
ಭಾರತ ರಾಷ್ಟ್ರೀಯ ಕಾಂಗ್ರೆಸ್ ಸಮಿತಿ ಆಯೋಜಿಸುತ್ತಿರುವ ಈ ಸಭೆಗೆ ಕೆಪಿಸಿಸಿ ಪರವಾಗಿ ಎಲ್ಲರಿಗೂ ಸ್ವಾಗತ ಕೋರುತ್ತೇನೆ. ಈ ಒಗ್ಗಟ್ಟನ್ನು ಮುಂದಿನ ದಿನಗಳಲ್ಲಿ ಮುಂದುವರಿಸಿಕೊಂಡು ಕರ್ನಾಟಕ ರಾಜ್ಯದಲ್ಲಿ ಪಡೆದ ಫಲಿತಾಂಶವನ್ನೇ 2024ರ ಚುನಾವಣೆಯಲ್ಲಿ ಪಡೆಯಲು ಕೆಲಸ ಮಾಡಲಾಗುವುದು ಎಂದು ಹೇಳಿದರು.
ಇನ್ನು ಈ ಸಭೆಗೆ ಹೆಚ್ಚಿನ ಭದ್ರತೆ ನೀಡಲಾಗಿದ್ದು, ನಿಯೋಜಿತ ನಾಯಕರ ಹೊರತಾಗಿ ಬೇರೆ ಯಾವುದೇ ನಾಯಕರು ಸಭೆ ನಡೆಯುವ ಹೋಟೆಲ್ ಹಾಗೂ ಬೇರೆ ಪಕ್ಷಗಳ ನಾಯಕರ ಆಹ್ವಾನಕ್ಕೆ ವಿಮಾನ ನಿಲ್ದಾಣಗಳಲ್ಲಿ ಎಂದು ಪಕ್ಷದ ನಾಯಕರಲ್ಲಿ ಮನವಿ ಮಾಡುತ್ತೇನೆ.
ಕೆಲವು ಸಚಿವರು ಹಾಗೂ ನಾಯಕರಿಗೆ ಮಾತ್ರ ಅನುಮತಿ ನೀಡಲಾಗಿದ್ದು, ಅನುಮತಿ ಇಲ್ಲದವರು ಹೋಟೆಲ್ ಗೆ ಬರಬೇಡಿ ಎಂದು ಮನವಿ ಮಾಡುತ್ತೇನೆ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ