ಪ್ರಗತಿವಾಹಿನಿ ಸುದ್ದಿ: ಮೂರು ಡಿಸಿಎಂ ವಿಚಾರವಾಗಿ ಎಐಸಿಸಿ ಅಧ್ಯಕ್ಷರು ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಹೀಗಾಗಿ ನಾನು ಈ ಬಗ್ಗೆ ಏನನ್ನೂ ಮಾತನಾಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಶಿವಮೊಗ್ಗದಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಎಐಸಿಸಿ ಅಧ್ಯಕ್ಷರು ಈ ಬಗ್ಗೆ ಸ್ಪಷ್ಟ ಸಂದೇಶ ನೀಡಿದ್ದಾರೆ ಹಾಗಾಗಿ ನಾನು ಈ ಬಗ್ಗೆ ಏನೂ ಮಾತನಾಡಲ್ಲ ಎಂದರು.
ಗ್ಯಾರಂಟಿ ಯೋಜನೆಗಳು ಲೋಕಸಭೆ ಚುನಾವಣೆಗೆ ಹೇಗೆ ಸಹಕಾರಿಯಾಗಲಿವೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ರಾಜ್ಯದ ಜನರಿಗೆ ಆರ್ಥಿಕ ಶಕ್ತಿ ತುಂಬುವ ಉದ್ದೇಶದೊಂದಿಗೆ ನಾವು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಆದರೆ ನಾವು ಈ ವಿಚಾರದಲ್ಲಿ ರಾಜಕೀಯ ಮಾಡಲು ಹೋಗುವುದಿಲ್ಲ. ರಾಜ್ಯದ ಜನರಿಗೆ ಆರ್ಥಿಕ ಶಕ್ತಿ ತುಂಬಿ ಅವರ ಅಭಿವೃದ್ಧಿ ಮಾಡಲು ಪ್ರಯತ್ನಿಸುತ್ತಿದ್ದೇವೆಯೇ ಹೊರತು ಮತಬ್ಯಾಂಕ್ ಗಾಗಿ ಜಾರಿ ಮಾಡಿಲ್ಲ” ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ