Wanted Tailor2
Cancer Hospital 2
Bottom Add. 3

*Devil and the deep blue sea ಪರಿಸ್ಥಿತಿಯಲ್ಲಿದ್ದೇವೆ, ಹೇಗೆ ಉತ್ತರಿಸಲಿ? ಎಂದ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾವೇರಿ ನೀರಿನ ವಿಚಾರವಾಗಿ ನಾಳೆ ಕರೆ ನೀಡಿರುವ ಬೆಂಗಳೂರು ಬಂದ್ ಹಾಗೂ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯದ ಹಿತರಕ್ಷಣೆಗೆ ಪ್ರತಿಭಟನೆ ಮಾಡಲು ನಾವು ಸಹಕಾರ ನೀಡುತ್ತೇವೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ನೆಲ, ಜಲ, ಭಾಷೆಯನ್ನು ಎಲ್ಲರೂ ಉಳಿಸಿಕೊಳ್ಳಬೇಕು. ಯಾರ ಹೋರಾಟಗಳಿಗೂ ಸರ್ಕಾರ ಅಡ್ಡಿಪಡಿಸುವುದಿಲ್ಲ. ಆದರೆ ಇದರಿಂದ ಜನರಿಗೆ ತೊಂದರೆ ಆಗಬಾರದು, ಶಾಂತಿ ಕಾಪಾಡಬೇಕು, ಹೋರಾಟಗಳಿಗೆ ಸರ್ಕಾರದ ಸಹಕಾರ ಇದ್ದೇ ಇರುತ್ತದೆ ಎಂದರು.

ಪ್ರತಿಭಟಿಸುವುದು ಪ್ರಜಾಪ್ರಭುತ್ವದ ಹಕ್ಕು, ಯಾವ ಪಕ್ಷದವರಿಗೂ ತೊಂದರೆ, ಅಡಚಣೆ ಮಾಡಲು ನಾವು ಮುಂದಾಗುವುದಿಲ್ಲ. ನಾವು ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ಹೋರಾಟ ಮಾಡುತ್ತಿದ್ದೇವೆ. ನಮ್ಮ ಪಕ್ಷದವರು ಸಹ ಏನು ಮಾಡುವುದು ಎಂದು ಕೇಳಿದರು, ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ಹೋರಾಟ ಮಾಡಿ ಎಂದು ಹೇಳಿದ್ದೇವೆ.

ಸುಪ್ರೀಂ ಕೋರ್ಟ್, ಹೈಕೋರ್ಟ್ ತೀರ್ಪು ಬಾಕಿ ಇದೆ, ಮಾಧ್ಯಮಗಳಲ್ಲಿ ಹೆಸರು ಬರುತ್ತದೆ ಎಂದು ಹೋರಾಟಕ್ಕೆ ಕರೆ ನೀಡಿದರೆ ಲಾಭವೇನು? ನ್ಯಾಯಾಲಯದಲ್ಲಿ ನಮ್ಮ ಪರವಾಗಿ ತೀರ್ಪು ಬಂದರೆ ಏನು ಮಾಡುತ್ತಾರೆ?

ಹೋರಾಟಗಳಿಂದ ಕಾನೂನಾತ್ಮಕ ತೊಂದರೆ ಆಗುವುದಿಲ್ಲವೇ ಎಂಬ ಸುದ್ದಿಗಾರರ ಪ್ರಶ್ನೆಗೆ ಮಂತ್ರಿಯಾಗಿ ಇದಕ್ಕೆ ಉತ್ತರ ನೀಡಲು ಆಗುವುದಿಲ್ಲ. ನ್ಯಾಯಾಲಯಕ್ಕೆ ಹಾಗೂ ಜನ ಇಬ್ಬರಿಗೂ ಗೌರವ ಕೊಡಬೇಕು. ಜನ ಸಹಕಾರ ಕೊಡದೆ ಇದ್ದರೆ ‘ಬಂದ್’ ಎನ್ನುವ ಹೋರಾಟಕ್ಕೆ ಮರ್ಯಾದೆ ಇರುವುದಿಲ್ಲ” devil and the deep blue sea ಪರಿಸ್ಥಿತಿಯಲ್ಲಿದ್ದೇವೆ, ಹೇಗೆ ಉತ್ತರಿಸಲಿ? ಎಂದು ತಿಳಿಸಿದರು.


Bottom Add3
Bottom Ad 2

You cannot copy content of this page