GIT add 2024-1
Laxmi Tai add
Beereshwara 33

*ಬಿಜೆಪಿಯವರು ರಾಜಕೀಯ ಲಾಭಕ್ಕಾಗಿ ರಾಜ್ಯದ ಘನತೆ ಹಾಳು ಮಾಡುತ್ತಿದ್ದಾರೆ: ಡಿಸಿಎಂ ಕಿಡಿ*

Anvekar 3
Cancer Hospital 2

ಬಿಜೆಪಿಯವರಿಗೆ ಕನಿಷ್ಠ ಪರಿಜ್ಞಾನ ಇಲ್ಲ

ಪ್ರಗತಿವಾಹಿನಿ ಸುದ್ದಿ: “ಬಿಜೆಪಿಯವರು ತಮ್ಮ ರಾಜಕೀಯ ಲಾಭಕ್ಕಾಗಿ ರಾಜ್ಯದ ಘನತೆ ಹಾಳು ಮಾಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ಕಾರಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯಿಸಿದರು.

ಬಾಂಬ್ ಸ್ಫೋಟ ವಿಚಾರವಾಗಿ ಬಿಜೆಪಿ ನಾಯಕರ ರಾಜಕೀಯ ಹೇಳಿಕೆ ಬಗ್ಗೆ ಕೇಳಿದಾಗ ಅವರು ಹೇಳಿದ್ದಿಷ್ಟು;

“ಬಾಂಬ್ ಸ್ಫೋಟ ಪ್ರಕರಣದ ತನಿಖೆಯಲ್ಲಿ ಪೊಲೀಸ್ ಅಧಿಕಾರಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಅವರು ತಮ್ಮ ಕರ್ತವ್ಯ ಮಾಡುತ್ತಿದ್ದಾರೆ. ತನಿಖೆ. ವಿಚಾರವಾಗಿ ನಾನು ಯಾವುದೇ ಹೇಳಿಕೆ ನೀಡುವುದಿಲ್ಲ. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಎಲ್ಲಾ ಆಯಾಮದಲ್ಲೂ ತನಿಖೆ ಮಾಡಲಾಗುತ್ತಿದೆ. ಬೆಂಗಳೂರಿನ ಗೌರವ ರಕ್ಷಣೆಗೆ ಏನು ಮಾಡಬೇಕೋ ಅದನ್ನು ಮಾಡುತ್ತೇವೆ.

Emergency Service

ಈ ಮಧ್ಯೆ ಬಿಜೆಪಿ ನಾಯಕರು ಈ ವಿಚಾರವಾಗಿ ರಾಜಕೀಯ ಮಾಡಲು ಮುಂದಾಗಿದ್ದಾರೆ. ಅದಕ್ಕಾಗಿ ಕರ್ನಾಟಕ ರಾಜ್ಯ ಹಾಗೂ ಬೆಂಗಳೂರಿನ ಘನತೆಗೆ ಧಕ್ಕೆ ತರುತ್ತಿದ್ದಾರೆ. ಆಮೂಲಕ ತಮ್ಮ ಗೌರವವನ್ನೂ ಹಾಳು ಮಾಡಿಕೊಳ್ಳುತ್ತಿದ್ದಾರೆ.

ಅವರ ಕಾಲದಲ್ಲಿ ಏನೆಲ್ಲಾ ಆಗಿದೆ ಎಂದು ಮರೆತಿದ್ದಾರೆ. ಅವರು ತಮ್ಮ ಮುಖವನ್ನೊಮ್ಮೆ ಕನ್ನಡಿಯಲ್ಲಿ ನೋಡಿಕೊಳ್ಳಲಿ. ಈ ವಿಚಾರವಾಗಿ ರಾಜಕೀಯ ಮಾಡಲು ನನಗೆ ಇಚ್ಛೆ ಇಲ್ಲ. ಈ ಸಮಯದಲ್ಲಿ ದೇಶದ ಐಕ್ಯತೆ, ಸಮಗ್ರತೆ ಹಾಗೂ ಶಾಂತಿ ಬಗ್ಗೆ ಅರಿವಿರಬೇಕು.”

ಬಿಜೆಪಿಯವರಿಗೆ ಕನಿಷ್ಠ ಪರಿಜ್ಞಾನ ಇಲ್ಲ

ಇದು ಬ್ರಾಂಡ್ ಬೆಂಗಳೂರು ಅಲ್ಲ ಬಾಂಬ್ ಬೆಂಗಳೂರು ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, “ಅವರಿಗೆ ಕನಿಷ್ಠ ಪರಿಜ್ಞಾನವೂ ಇಲ್ಲ. ಸಮಯ ಪ್ರಜ್ಞೆ, ತಮ್ಮ ಜವಾಬ್ದಾರಿಯ ಅರಿವು ಇಲ್ಲದವರು ಈ ರೀತಿ ಮಾತನಾಡುತ್ತಾರೆ” ಎಂದು ತಿರುಗೇಟು ನೀಡಿದರು.

Bottom Add3
Bottom Ad 2