*ಬಿಜೆಪಿಯವರಿಗೆ ಜನ ವಿಶ್ರಾಂತಿ ಪಡೆಯಲು ಮನೆಗೆ ಕಳುಹಿಸಿದ್ದಾರೆ, ಆದರೂ ಮಾಡಲು ಕೆಲಸವಿಲ್ಲ ಎಂದು ನಮ್ಮ ಯೋಜನೆ ಪ್ರಚಾರ ಮಾಡುತ್ತಿದ್ದಾರೆ; ಡಿ.ಕೆ.ಶಿವಕುಮಾರ್ ಟಾಂಗ್*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ನಾಯಕರಿಗೆ ರಾಜ್ಯದ ಜನ ವಿಶ್ರಾಂತಿ ಪಡೆಯಲು ಮನೆಗೆ ಕಳುಹಿಸಿದ್ದು, ಅವರು ವಿಶ್ರಾಂತಿ ಪಡೆಯಲಿ. ಅದು ಬಿಟ್ಟು ಅವರಿಗೆ ಮಾಡಲು ಕೆಲಸವಿಲ್ಲದೆ ಅನಗತ್ಯವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಬಿಜೆಪಿ ನಾಯಕರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಮೊದಲು ಧರಣಿ ಮಾಡಬೇಕು. ಅಕ್ಕಿಯ ದಾಸ್ತಾನು ಇದ್ದರೂ ಕೂಡ ಕೇಂದ್ರ ಸರ್ಕಾರ ಹಾಗೂ ಭಾರತ ಆಹಾರ ಪ್ರಾಧಿಕಾರ ರಾಜ್ಯ ಸರ್ಕಾರಕ್ಕೆ ಅಕ್ಕಿ ನೀಡಲು ನಿರಾಕರಿಸಿದೆ. ಕೇಂದ್ರದ ಈ ನಿಲುವಿನ ವಿರುದ್ಧ ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ತಂಡ ಹೋರಾಟ ಮಾಡಲಿಏನೇ ಮಾಡಿದರು ನಮ್ಮ ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಪ್ರಚಾರ ಸಿಗುತ್ತಿದ್ದು, ಅದಕ್ಕಾಗಿ ಅವರಿಗೆ ಧನ್ಯವಾದಗಳು ಎಂದು ಟಾಂಗ್ ನೀಡಿದರು.
ಜನ ನಮಗೆ ಆಡಳಿತ ಮಾಡಲು ಅವಕಾಶ ನೀಡಿದ್ದು ನಾವು ಜನಪರ ಆಡಳಿತ ಮಾಡಿ ಅವರ ನಂಬಿಕೆ ಉಳಿಸಿಕೊಳ್ಳುತ್ತೇವೆ ಎಂದರು.
ಮುಖ್ಯಮಂತ್ರಿ ಕಚೇರಿಯಲ್ಲಿ ಕೆಲಸ ಪಡೆಯಲು 30 ಲಕ್ಷ ನೀಡಬೇಕು ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಪ್ರಶ್ನಿಸಿದಾಗ, “ಕುಮಾರಸ್ವಾಮಿಯವರು ಚುನಾವಣೆಯಲ್ಲಿ ಕಡಿಮೆ ನಂಬರ್ ಬಂದಿದೆ ಎಂಬ ಬೇಸರದಲ್ಲಿ ಮಾತನಾಡುತ್ತಿದ್ದಾರೆ. ಹೀಗಾಗಿ ಅವರ ಮಾತುಗಳ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ಅವರ ಆರೋಪ ಸತ್ಯಕ್ಕೆ ದೂರವಾದುದು. ಸರ್ಕಾರದ ಯಾವುದೇ ಕಚೇರಿಯಲ್ಲಿ ಹಣ ಪಡೆದು ಕೆಲಸ ನೀಡಲಾಗುತ್ತಿಲ್ಲ. ಅವರ ಬಳಿ ದಾಖಲೆ ಇದ್ದರೆ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಲಿ ತನಿಖೆ ಮಾಡಿಸಲಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅದಕ್ಕೆ ಅವಕಾಶವಿದೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ