Kannada NewsKarnataka NewsLatestPolitics

*ಬಿಜೆಪಿಯವರಿಗೆ ಬುದ್ಧಿಭ್ರಮಣೆಯಾಗಿದೆ; ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನಲ್ಲಿ ಹನಿ ನೀರಿಗೂ ತತ್ವಾರ ಶುರುವಾಗಿದೆ. ಕಾಂಗ್ರೆಸ್ ಸರ್ಕಾರ ಅಲ್ಲಿ ಸದ್ದಿಲ್ಲದೇ ಕಾವೇರಿ ನೀರು ತಮಿಳುನಾಡಿಗೆ ಹರಿಸಿದೆ ಎಂಬ ವಿಪಕ್ಷ ಬಿಜೆಪಿ ಆರೋಪಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ. ಬಿಜೆಪಿಯವರಿಗೆ ಬುದ್ಧಿಭ್ರಮಣೆಯಾಗಿದೆ ಎಂದು ಗುಡುಗಿದ್ದಾರೆ.

Home add -Advt

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ನಮಗೆ ನೀರಿಲ್ಲ. ಹೀಗಿರುವಾಗ ನಾವ್ಯಾಕೆ ತಮಿಳುನಾಡಿಗೆ ಕಾವೇರಿ ನೀರು ಹರಿಸಲಿ? ನಮಗೇನು ಬುದ್ಧಿ ಇಲ್ಲಾ ಅಂದುಕೊಂಡಿದ್ದಾರಾ ಅವರು? ಬರಿ ರಾಜಕೀಯ ದುರುದ್ದೇಶಕ್ಕೆ ಕುಡಿಯುವ ನೀರಿನ ವಿಚಾರವಾಗಿ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಬಿಜೆಪಿಯವರು. ಅವರು ಮೆಂಟಲ್ ಬ್ಯಾಲೆನ್ಸ್ ಕಳೆದುಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿರೋಧ ಪಕ್ಷ ಬಿಜೆಪಿ ನಾಯಕರಿಗೆ ಮಾನ ಮರ್ಯಾದೆ ಇದ್ದರೆ ಕೇಂದ್ರ ಸರ್ಕಾರದಿಂದ ಮೇಕೆದಾಟುಗೆ ಅನುಮತಿ ಕೊಡಿಸಲಿ. ಬರ ಪರಿಹಾರ ಕೊಡಿಸಲಿ ಎಂದು ಆಗ್ರಹಿಸಿದರು.

ನರೇಗಾ ಯೋಜನೆಯಲ್ಲಿ ಮಾನವ ಕೂಲಿ ದಿನಗಳನ್ನು 100 ರಿಂದ 150ಕ್ಕೆ ಏರಿಸಲಿ. ಅದನ್ನು ಬಿಟ್ಟು ರಾಜಕೀಯ ಹೇಳಿಕೆ ನೀಡುವುದು ಬೇಡ ಎಂಂದು ಕಿಡಿಕಾರಿದರು.

Related Articles

Back to top button