Election News

*ಪಕ್ಷ ಗೆಲ್ಲಲು ನಮ್ಮದೇ ಲೆಕ್ಕಾಚಾರ ಹಾಕಿ ಅಭ್ಯರ್ಥಿ ಆಯ್ಕೆ ಮಾಡುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ರಾಜಕಾರಣದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಹೇಗೆ ಲೆಕ್ಕಾಚಾರ ಹಾಕುತ್ತಿದ್ದಾರೋ ಅದೇ ರೀತಿ ನಾವು ಲೆಕ್ಕಚಾರ ಹಾಕಿ ತೀರ್ಮಾನ ಮಾಡುತ್ತೇವೆ. ನಾವು ಗೆಲ್ಲಬೇಕು ಅಷ್ಟೇ. ಅದಕ್ಕೆ ಪೂರಕವಾಗಿ ಅಭ್ಯರ್ಥಿ ಆಯ್ಕೆ ನಿರ್ಧಾರ ಮಾಡುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಮೈಸೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಸಂಜೆ ಪ್ರತಿಕ್ರಿಯೆ ನೀಡಿದರು.

ಉಪಚುನಾವಣೆ ಅಭ್ಯರ್ಥಿ ಆಯ್ಕೆ, ಅದರಲ್ಲೂ ಚನ್ನಪಟ್ಟಣ ಅಭ್ಯರ್ಥಿ ಬಗ್ಗೆ ಕೇಳಿದಾಗ, “ಉಪಚುನಾವಣೆ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಬಹುತೇಕ ಅಂತಿಮ ಹಂತಕ್ಕೆ ಬಂದಿದ್ದು, ನಾವು ಶೀಘ್ರದಲ್ಲೇ ತೀರ್ಮಾನ ಮಾಡಿ ಪ್ರಕಟಿಸುತ್ತೇವೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ. ಗೆಲ್ಲುತ್ತೇವೆ” ಎಂದು ತಿಳಿಸಿದರು.

ಚನ್ನಪಟ್ಟಣದಲ್ಲಿ ಯಾರು ಅಭ್ಯರ್ಥಿ, ಯೋಗೇಶ್ವರ್ ಅವರು ಪಕ್ಷಕ್ಕೆ ಸೇರುವ ಮಾಹಿತಿ ಇದೆ ಎಂದು ಕೇಳಿದಾಗ, “ನಾನೇ ಅಭ್ಯರ್ಥಿ ಎಂದು ಹೇಳಿದ್ದೇನೆ. ಪಕ್ಷದ ಚಿಹ್ನೆ ಮೇಲೆಯೇ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ. ಇನ್ನು ಯೋಗೇಶ್ವರ್ ಅವರ ವಿಚಾರ ನಾನು ಮಾತನಾಡಲು ಆಗುವುದಿಲ್ಲ. ನಾನು ಯಾರ ಜತೆಗೂ ಮಾತುಕತೆ ನಡೆಸಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದೇನೆ. ಮುಖ್ಯಮಂತ್ರಿಗಳು ಕೆಲವು ವಿಚಾರ ತಿಳಿಸಿದ್ದಾರೆ” ಎಂದು ತಿಳಿಸಿದರು.

Home add -Advt

ಜೆಡಿಎಸ್ ಅಭ್ಯರ್ಥಿ ಘೋಷಣೆಗೆ ಕಾಯುತ್ತಿದ್ದೀರಾ ಎಂದು ಕೇಳಿದಾಗ, “ಹಾಗೇನು ಇಲ್ಲ. ಇನ್ನು ಸಮಯವಿದೆ. ನಾನು ಅಲ್ಲೇ ಇರುತ್ತೇನೆ. ನಾನೇ ಬಿ ಫಾರಂ ನೀಡುವುದು. ಈಗಾಗಲೇ ಪ್ರಧಾನ ಕಾರ್ಯದರ್ಶಿಗಳು, ಸಿಎಂ ಹಾಗೂ ನಾನು ಕೂತು ಚರ್ಚೆ ಮಾಡಿದ್ದೇವೆ. ಖರ್ಗೆ ಅವರಿಂದ ಅನುಮತಿ ಪಡೆದು ಬಿ ಫಾರಂಗೆ ನಾನೇ ಸಹಿ ಹಾಕಿ ಕೊಡುತ್ತೇನೆ” ಎಂದು ತಿಳಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button