Politics

*ಸಚಿವ ಸಂಪುಟ ಪುನಾರಚನೆ ವಿಚಾರ: ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸಚಿವ ಸಂಪುಟ ಪುನಾರಚನೆಯಾಗಲಿದೆ ಎಂಬ ಚರ್ಚೆ ಬೆನ್ನಲ್ಲೇ ದೆಹಲಿ ಪ್ರವಾಸದಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಅಂತಹ ಯಾವುದೇ ಸಂದರ್ಭ ಈಗ ಬಂದಿಲ್ಲ ಎಂದು ತಿಳಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆಗೆ ಹೈಕಮಾಂಡ್ ಒಪ್ಪಿಗೆ ಸಿಕ್ಕಿಲ್ಲ. ವರಿಷ್ಠರು ಗ್ರೀನ್ ಸಿಗ್ನಲ್ ನೀಡಿಲ್ಲ ಎಂದಿದ್ದಾರೆ.

ನಾನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಭೇಟಿಯಾದ ಕಾರಣವೇ ಬೇರೆ. ನಮ್ಮ ಸರ್ಕಾರ ಮಹಾತ್ಮಾ ಗಾಂಧಿಯವರು ಕಾಂಗ್ರೆಸ್ ನಾಯಕತ್ವ ವಹಿಸಿಕೊಂಡು 100 ವರ್ಷ ಕಳೆದಿರುವ ಹಿನ್ನೆಲೆಯಲ್ಲಿ ಹಾಗೂ ಡಿ.28ರಂದು ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಬೆಳಗಾವಿಯಲ್ಲಿ ಆಯೋಜಿಸುವ ಬಗ್ಗೆ ನಿರ್ಧರಿಸಿದೆ. ಅವುಗಳ ಬಗ್ಗೆ ಚರ್ಚಿಸಲು ನಾನು ಬಂದಿದ್ದೇನೆ ಎಂದು ತಿಳಿಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button