Kannada NewsKarnataka NewsLatest

*ಬೆಂಕಿ ಅವಘಡ; ಸುಟ್ಟು ಕರಕಲಾದ ಸಂಪೂರ್ಣ ಮನೆ*

ಪ್ರಗತಿವಾಹಿನಿ ಸುದ್ದಿ: ದೇವರ ಮುಂದೆ ಹಚ್ಚಿದ್ದ ದೀಪದಿಂದ ಬೆಂಕಿ ಹೊತ್ತಿಕೊಂದ ಪರಿಣಾಮ ಇಡೀ ಮನೆಗೆ ಬೆಂಕಿ ವ್ಯಾಪಿಸಿ ಮನೆಯಲ್ಲಿದ್ದ ವಸ್ತುಗಳೆಲ್ಲ ಸುಟ್ಟು ಕರಕಲಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ತೋರಣಗಟ್ಟೆ ಗ್ರಾಮದ ಮನೆಯಲ್ಲಿ ಈ ಘಟನೆ ನಡೆದಿದೆ. ನಿನ್ನೆ ಸಂಜೆ ದೇವರ ಮನೆಯಲ್ಲಿ ದೀಪ ಹಚ್ಚಿ ಮನೆಯವರೆಲ್ಲ ಕಾರ್ಯಕ್ರಮದ ನಿಮಿತ್ತ ಮನೆಗೆ ಬಾಗಿಲು ಹಾಕಿ ಹೊರ ಹೋಗಿದ್ದರು. ಮನೆಗೆ ವಾಪಾಸ್ ಆಗುವಷ್ಟರಲ್ಲಿ ಇಡೀ ಮನೆ ಬೆಂಕಿಯಲ್ಲಿ ಹೊತ್ತಿ ಉರಿದಿದೆ.

Home add -Advt

ಮನೆಯಲ್ಲಿದ್ದ ವಸ್ತುಗಳು, ಹಣ, ಒಡವೆ, ಧಾನ್ಯಗಳು ಬೆಂಕಿಗಾಹುತಿಯಾಗಿವೆ. ಬಡಪ್ಪ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ. ಜಗಳೂರು ತಾಲೂಕು ದಂಡಾಧಿಕಾರಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಬೆಂಕಿ ಅವಗಢದಿಂದ ಆದ ನಷ್ಟಕ್ಕೆ ಪರಿಹಾರ ನೀಡುವಂತೆ ಬಡಪ್ಪ ಮನವಿ ಮಾಡಿದ್ದಾರೆ.

Related Articles

Back to top button