
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಅಧಿಕಾರ ವಿಕೇಂದ್ರಿಕರಣ ಮಾಡುವ ನಿಟ್ಟಿನಲ್ಲಿ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಿಗೆ ಇಲಾಖೆಯ ಜಂಟಿ ನಿರ್ದೇಶಕರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ವಲಯದ ಜಂಟಿ ನಿರ್ದೇಶಕರಾಗಿ ಬಸವರಾಜ ಹೂಗಾರ ನೇಮಕಗೊಂಡಿದ್ದು, ಇಂದು ಬೆಳಗಾವಿಯಲ್ಲಿ ಅವರು ಅಧಿಕಾರ ಸ್ವೀಕರಿಸಿದರು.
ಬೆಳಗಾವಿ ವಲಯವು ಬಾಗಲಕೋಟ, ವಿಜಯಪೂರ, ಹಾವೇರಿ, ಗದಗ, ಕಾರವಾರ, ಧಾರವಾಡ ಮತ್ತು ಉತ್ತರ ಕನ್ನಡ ಈ ಜಿಲ್ಲೆಗಳು ಸಾಂಸ್ಕೃತಿಕ ವ್ಯಾಪ್ತಿಯನ್ನು ಹೊಂದಿದೆ. ಮೇಲ್ಕಂಡ ಏಳು ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ಟ್ರಸ್ಟಗಳು, ಅಕಾಡೆಮಿಗಳು ಮತ್ತು ರಂಗಾಯಣ, ರಂಗಮಂದಿರಗಳು ಹಾಗೂ ಏಳು ಜಿಲ್ಲೆಗಳ ಸಹಾಯಕ ನಿರ್ದೇಶಕರ ಮೇಲ್ವಿಚಾರಣೆಯ ಅಧಿಕಾರ ನೀಡಲಾಗಿದೆ.
ಕವಿ, ಬರಹಗಾರ ಬಸವರಾಜ ಹೂಗಾರ ಅವರು ಮೂಲತಃ ಬಾಗಲಕೋಟೆ ಜಿಲ್ಲೆಯ ಸೀಮಿಕೇರಿ ಗ್ರಾಮದವರಾಗಿದ್ದು, ಸಹಾಯಕ ನಿರ್ದೇಶಕರಾಗಿ ತುಮಕೂರ, ಕೊಪ್ಪಳ, ಕಾರವಾರ, ಮಂಡ್ಯ ಮತ್ತು ಧಾರವಾಡ ಹೀಗೆ ಅನೇಕ ಜಿಲ್ಲೆಗಳಲ್ಲಿ ಅಲ್ಲದೇ ಬೆಂಗಳೂರಿನ ಲಲಿತಕಲಾ ಅಕಾಡೆಮಿ ರಜಿಸ್ಟಾರ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯು ಇವರ ತತ್ರಾಣಿ ಕಾವ್ಯಕ್ಕೆ ಬಹುಮಾನ ನೀಡಿ ಗೌರವಿಸಿದೆ. “ತತ್ರಾಣಿ”, “ಹಾದಿಜಂಗಮ”, “ಬೀದಿ ಬೆಳಕಿನ ಕಂದಿಲು”, ಇವರ ಪ್ರಮುಖ ಕೃತಿಗಳು, ಅನೇಕ ಸಮ್ಮೇಳನಗಳಲ್ಲಿ ಇವರು ಪ್ರಬಂಧಗಳನ್ನು ಮಂಡಿಸಿದ್ದಾರೆ. ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಹಾಗೂ ಕರ್ನಾಟಕ ವಿಶ್ವವಿದ್ಯಾಲಯ ಪದವಿ ತರಗತಿಗಳಿಗೆ ಇವರ ಕವಿತೆ ಹಾಗೂ ಲೇಖನಗಳು ಪಠ್ಯವಾಗಿವೆ.
ಬೆಲೆ ಏರಿಕೆಗೆ ಆಕ್ರೋಶ; ಕಾಂಗ್ರೆಸ್ ನಿಂದ ಸೈಕಲ್ ಜಾಥಾ