ಪ್ರಗತಿವಾಹಿನಿ ಸುದ್ದಿ; ನವದೆಹಲಿ: ನೂತನ ಮುಖ್ಯಮಂತ್ರಿ ಆಯ್ಕೆ ವಿಚಾರ ಕ್ಷಣ ಕ್ಷಣಕ್ಕೂ ಕಗ್ಗಂಟಾಗುತ್ತಿದ್ದು, ಸಿಎಂ ಹುದ್ದೆಗಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವೆ ತೀವ್ರ ಪೈಪೋಟಿ ನಡೆದಿದೆ.
ಈ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ನ ಎಲ್ಲಾ ನಾಯಕರನ್ನು ಭೆಟಿಯಾಗುತ್ತೇನೆ. ಮೊದಲು ಖರ್ಗೆ ಅವರನ್ನು ಭೇಟಿಯಾಗುತ್ತೇನೆ ಎಂದರು.
ಕಾಂಗ್ರೆಸ್ ಪಕ್ಷ ನನಗೆ ತಾಯಿಯಿದ್ದಂತೆ. ಹೈಕಮಾಂಡ್ ಇದೆ, 135 ಶಾಸಕರು ಆಯ್ಕೆಯಾಗಿದ್ದೇವೆ. ಮುಖ್ಯಮಂತ್ರಿ ಸ್ಥಾನ ಕೊಡದಿದ್ದರೆ ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂಬುದು ಶುದ್ಧ ಸುಳ್ಳು. ಇಂತಹ ಸುಳ್ಳು ಸುದ್ದಿ ಹರಡುವವರ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ ಎಂದು ಎಚ್ಚರಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ