Kannada NewsKarnataka NewsLatestPolitics

*ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.

“ಅಡುಗೆ ಅನಿಲ್ ಸಿಲಿಂಡರ್ ಕೊರತೆಯಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ. ಈ ವಿಚಾರವಾಗಿ ಬಿಜೆಪಿಯ ಯಾವುದೇ ಸಂಸದರು ಬಾಯಿ ಬಿಡುತ್ತಿಲ್ಲ. ಹಳ್ಳಿ ಜನರು, ರೈತರು ಹಾಗೂ ಹೊಟೇಲ್ ಗಳಿಗೆ ಸೌದೆ ಒಲೆ ಬಳಸಲು ಕಟ್ಟಿಗೆ ಬಳಸಿಕೊಳ್ಳಲು ಅವಕಾಶ ನೀಡುವುದಿಲ್ಲ” ಎಂದರು.

Home add -Advt

“ಈ ಇಂಧನ ಬೆಲೆ ಏರಿಕೆಯಿಂದ ಜನ ಪರದಾಡುತ್ತಿದ್ದಾರೆ. ಇದರಲ್ಲಿ ರಾಜ್ಯ ಸರ್ಕಾರ ಏನೂ ಮಾಡಲು ಆಗುವುದಿಲ್ಲ. ಕೇಂದ್ರ ಸರ್ಕಾರ ಇದಕ್ಕೆ ಹೊಣೆ. ಕೇಂದ್ರ ಸರ್ಕಾರ ವಿದೇಶಾಂಗ ನೀತಿ ಬಗ್ಗೆ ಸ್ಪಷ್ಟವಾಗಿ ಮಾತನಾಡುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಈ ವಿಚಾರದಲ್ಲಿ ಕೇಂದ್ರದ ಧೋರಣೆ ಖಂಡನೀಯ. ನಾಗರಕರಿಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರ ನೋಡಿಕೊಳ್ಳಬೇಕು. ಮುಂದೆ ಪರಿಸ್ಥಿತಿ ಹೇಗಿರುತ್ತದೆಯೋ ಹೇಗೋ ಈಗಾಗಲೇ ಗ್ಯಾಸ್ ಚಾಲಿತ ಆಟೋ ಬಂದ್ ಆಗಿದ್ದು, ಸಮಸ್ಯೆ ಹೆಚ್ಚುತ್ತಿದೆ” ಎಂದು ತಿಳಿಸಿದರು.

Let BJP MPs speak on LPG shortage in Parliament and get justice for the people: DCM DK Shivakumar

Bengaluru, March 12: Deputy Chief Minister DK Shivakumar today demanded that the BJP MPs from the state raise the issue of LPG shortage in the Parliament and resolve the issue.

“The MPs speak on all kinds of issues. Instead, they should raise the issue of LPG shortage in the Parliament and get justice to the people of the state,” he said while speaking to reporters at his Sadashivanagar residence.

“The shortage of LPG cylinders is causing a lot of problems for the public. But none of the BJP MPs are speaking up on this issue. The price hike for LPG is also affecting people, but the State government can’t do anything about it as the Centre is responsible for the LPG prices. The Centre isn’t clarifying its foreign policy also,” he hit out.

“The stand of the Centre on the issue is condemnable. It must ensure that there is no inconvenience to the people. We don’t know how worse the situation will get. The autorickshaws run on LPG have already stopped plying,” he added.

Related Articles

Back to top button