ಪ್ರಗತಿವಾಹಿನಿ ಸುದ್ದಿ: ಜೆಡಿಎಸ್ ಸಂಸದ ಪ್ರಜ್ವಲ್ ರೇವನ್ಣ ಪೆನ್ ಡ್ರೈವ್ ಪ್ರಕರಣ ರಾಜ್ಯ ರಾಜಕಾರಣದಲ್ಲಿ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಪ್ರಕರಣದ ಬಗ್ಗೆ ಎಸ್ ಐಟಿ ತನಿಖೆ ಚುರುಕುಗೊಳಿಸಿದೆ. ಪೆನ್ ಡ್ರೈವ್ ಪ್ರಕರಣ, ಆತ್ಯಾಚಾರ ಆರೋಪ ಪ್ರಕರಣದಲ್ಲಿ ಎಸ್ಐಟಿ ವಶದಲ್ಲಿರುವ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ.
ಡಿಸಿಎಂ.ಡಿ.ಕೆ.ಶಿವಕುಮಾರ್ 100 ಕೋಟಿ ಆಫರ್ ನೀಡಿದ್ದರು ಎಂದು ದೇವರಾಜೇಗೌಡ ಆರೋಪಿಸಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ. ದೇವೇರಾಜೇಗೌಡ ಆರೋಪಕ್ಕೆ ತುಇರುಗೇಟು ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಆತ ತಲೆಕೆಟ್ಟವನು, ಆಸ್ಪತ್ರೆಗೆ ಸೇರಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ದೇವರಾಜೇಗೌಡ ಏನುಬೇಕಾದರೂ ಮಾತನಾಡಿಕೊಳ್ಳಲಿ. ಆತನಿಗೆ ತಲೆಕೆಟ್ಟಿದೆ ಆಸ್ಪತ್ರೆಗೆ ಸೇರಿಸಬೇಕು. ನನ್ನ ಹೆಸರನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದರು ಗುಡುಗಿದರು.
ನಾನು ಆತನೊಂದಿಗೆ ಯಾವುದೇ ಮಾತುಕತೆ ನಡಿಸಿಲ್ಲ, ಯಾವ ತಪ್ಪು ಮಾಡಿಲ್ಲ. ಒಂದು ಪಕ್ಷದಲ್ಲಿ ಸಾವಿರಾರು ಜನರು ಭೇಟಿಯಾಗುತ್ತಾರೆ. ಯಾವ ಹುತ್ತದಲ್ಲಿ ಯಾವ ಹಾವು ಇರುತ್ತೋ ಯಾರಿಗೆ ಗೊತ್ತು? ಎಂದು ಪ್ರಶ್ನಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ