*ಚುರುಕುಗೊಂಡ ಪೂರ್ವ ಮುಂಗಾರು:4-5 ದಿನ ಭಾರಿ ಮಳೆ*

ಪ್ರಗತಿವಾಹಿನಿ ಸುದ್ದಿ : ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಚುರುಕಾಗಿದ್ದು, ಇಂದಿನಿಂದ ಮುಂದಿನ 4-5 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಸೈಕ್ಲೋನಿಕ್ ಪರಿಚಲನೆ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ ಮತ್ತು ಮೈಸೂರು ಭಾಗಗಳಲ್ಲಿ ಬಲವಾದ ಗಾಳಿಯೊಂದಿಗೆ ಆಲಿಕಲ್ಲು ಮಳೆಯಾಗುವ ಸಂಭವವಿದ್ದು, ಈ ಪ್ರದೇಶಗಳಿಗೆ ‘ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲೂ ಮಳೆಯಾಗಲಿದೆ.
ಇನ್ನು ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಸಾಧಾರಣದಿಂದ ಭಾರಿ ಮಳೆಯ ಮುನ್ನೆಚ್ಚರಿಕೆ ಇದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




