*ಕುಡಿಯುವ ನೀರಿಗೆ ಮೊದಲ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಬೇಸಿಗೆ ಸಮಯದಲ್ಲಿ ಜನರಿಗೆ ಕುಡಿಯುವ ನೀರು ಪೂರೈಸುವುದು ನಮ್ಮ ಮೊದಲ ಆದ್ಯತೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸಚಿವ ಶರಣಬಸಪ್ಪ ಗೌಡ ದರ್ಶನಾಪುರ ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ಪ್ರತಿನಿಧಿಗಳ ನಿಯೋಗವು ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಬುಧವಾರ ಭೇಟಿ ಮಾಡಿದರು. ಈ ವೇಳೆ ನಾರಾಯಣಪುರ ಬಸವಸಾಗರ ಜಲಾಶಯದ ಬಲದಂಡೆ ಹಾಗೂ ಎಡದಂಡೆಯಿಂದ ಏ.15ರವರೆಗೆ ಬೆಳೆಗಳಿಗೆ ನೀರು ಹರಿಸಬೇಕು … Continue reading *ಕುಡಿಯುವ ನೀರಿಗೆ ಮೊದಲ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್*