ಪ್ರಗತಿವಾಹಿನಿ ಸುದ್ದಿ: ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತೆ ರಾಜ್ಯ ಸರ್ಕಾರ ಕೇಳಿದ ₹18,172 ಕೋಟಿ ಬರಪರಿಹಾರದಲ್ಲಿ ಕೇಂದ್ರ ಸರ್ಕಾರ ಕೇವಲ 3,454 ಕೋಟಿ ಬಿಡುಗಡೆ ಮಾಡುವ ಮೂಲಕ ಕನ್ನಡಿಗರು ಹಾಗೂ ಕರ್ನಾಟಕದ ರೈತರ ಮೇಲಿರುವ ತನ್ನ ದ್ವೇಷವನ್ನು ಮತ್ತೆ ನಿರೂಪಿಸಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ರಾಜ್ಯದ ರೈತರು ಹಾಗೂ ಕನ್ನಡಿಗರ ಸ್ವಾಭಿಮಾನದ ರಕ್ಷಣೆಗಾಗಿ ಕಾಂಗ್ರೆಸ್ ಸರ್ಕಾರ ಎಷ್ಟೇ ದೊಡ್ಡ ಸವಾಲುಗಳನ್ನಾದರೂ ಸ್ವೀಕರಿಸಲು ಸಿದ್ಧವಿದೆ. ನಾವು ಕೇಳುತ್ತಿರುವುದು ಕನ್ನಡಿಗರ ಹಕ್ಕನ್ನೇ ಹೊರತು ಭಿಕ್ಷೆಯನ್ನಲ್ಲ ಎಂದು ಕಿಡಿಕಾರಿದ್ದಾರೆ.
ರಾಜ್ಯ ಸರ್ಕಾರ ಕಳೆದ ಸೆಪ್ಟೆಂಬರ್‌ನಲ್ಲಿ 18,172 ಕೋಟಿ ಬರ ಪರಿಹಾರ ಕೋರಿ ಕೇಂದ್ರಕ್ಕೆ ಮೊರೆ ಹೋಗಿತ್ತು. ಆದರೆ, ಬರ ಪರಿಹಾರ ಬಿಡುಗಡೆ ಮಾಡದೆ ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಈಗ ಕೇಂದ್ರ ಸರ್ಕಾರ 3,464 ಕೋಟಿ ರೂ. ಬರ ಪರಿಹಾರ ನೀಡುವುದಾಗಿ ಹೇಳಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ