ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು, ಸಿಬಿಐ ದಾಳಿ ಬಗ್ಗೆ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ನನ್ನ ಕುಟುಂಬಕ್ಕೆ ತನಿಖಾ ಸಂಸ್ಥೆಗಳಿಂದ ನಿರಂತರ ಕಿರುಕುಳ ನೀಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಇಂದು ನಮ್ಮ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ ನಡೆಸಿದೆ. ಐಟಿ, ಇಡಿ, ಸಿಬಿಐ ಎಲ್ಲಾ ತನಿಖಾ ಸಂಸ್ಥೆಗಳು ದೂರು ದಾಖಲಿಸಿಕೊಂಡು ದಾಳಿ ನಡೆಸುತ್ತಿವೆ. ನನ್ನ ಕುಟುಂಬಕ್ಕೆ ತನಿಖಾ ಸಂಸ್ಥೆಗಳಿಂದ ನಿರಂತರ ಕಿರುಕುಳವಾಗುತ್ತಿದೆ. ನಾನು ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿ ಭಯಪಡುವ ಅಗತ್ಯವಿಲ್ಲ ಎಂದು ಹೇಳಿದರು.
ನನ್ನ ಸಂಬಂಧಿಕರು, ವ್ಯವಹಾರದ ಪಾಲುದಾರರಿಗೂ ನೋಟೀಸ್ ನೀಡಿದ್ದಾರೆ. ಸಿಬಿಐ ಏನೇನು ಕಿರುಕುಳ ಕೊಡುತ್ತೆ ಕೊಡಲಿ. ವಿರೋಧಿಗಳನ್ನು ಮಟ್ಟಹಾಕಲು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡುತ್ತಿದ್ದಾರೆ. ತೊಂದರೆ ಕೊಡಬೇಕು ಎಂಬುದೇ ಅವರ ಮುಖ್ಯ ಉದ್ದೇಶವಾಗಿರುವಾಗ ಏನು ಹೇಳಲು ಆಗುತ್ತೆ. ನನ್ನನ್ನು ಟಾರ್ಗೆಟ್ ಮಾಡಿ ಕಾಂಗ್ರೆಸ್ ನವರಿಗೆ ತೊಂದರೆ ಕೊಡಬೇಕು ಎಂಬುದೇ ಅವರ ಉದ್ದೇಶ. ನ್ಯಾಯಾಲಯ, ದೇವರ ಮೇಲೆ ಭಾರ ಹಾಕಿ ಮುನ್ನಡೆಯುತ್ತೆನೆ. ನಾನು ಯಾವುದೆ ತಪ್ಪು ಮಾಡಿಲ್ಲ ದಾಖಲೆಗಳು ಲೀಗಲ್ ಆಗಿವೆ ಎಂದು ತಿಳಿಸಿದ್ದಾರೆ.
ಡಿ.ಕೆ.ಶಿವಕುಮಾರ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ
https://pragati.taskdun.com/attack-on-dk-shivakumar-educational-institutions/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ